ರಾಮನಗರ:ಜನವರಿ 22ರಂದು ಜರುಗಲಿರುವ ರಾಮಲ್ಲಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ತಮದಂದು ಗೋಧ್ರಾ ಮಾದರಿಯ ದುರಂತ ಸಂಭವಿಸಲಿದೆ ಎಂದು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಯನ್ನು ಸಂಸದ ಡಿ.ಕೆ. ಸುರೇಶ್​ ಸಮರ್ಥಿಸಿಕೊಂಡಿದ್ದಾರೆ.
ರಾಮನಗರದ ಚನ್ನಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಹಳ್ಳಿ ಹಳ್ಳಿಗಳಲ್ಲೂ ಮಂದಿರ ನಿರ್ಮಾಣವಾಗಬೇಕು ಎನ್ನುವುದು ನಮ್ಮ ಉದ್ದೇಶ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಹಾಗಾಗಿ, ಮಂದಿರಕ್ಕೂ ಮತ್ತು ಭಕ್ತರಿಗೂ ರಕ್ಷಣೆ ಕೊಡಬೇಕಿರುವುದು ಸರ್ಕಾರದ ಜವಾಬ್ದಾರಿ. ಅದೇ ದೃಷ್ಟಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ:ರಾಮಮಂದಿರ ಉದ್ಘಾಟನೆಯಂದು ಗೋಧ್ರಾ ರೀತಿಯ ದುರಂತ ಸಂಭವಿಸುವ ಮಾಹಿತಿ ಇದೆ: ಬಿ.ಕೆ. ಹರಿಪ್ರಸಾದ್
ರಾಮಮಂದಿರ ನಿರ್ಮಾಣ ಭಾರತೀಯರ ಆಸೆ. ಒಬ್ಬರು ಒಂದು ಕಡೆ ರಾಮಮಂದಿರ ನಿರ್ಮಾಣ ಮಾಡಬೇಕು ಎನ್ನುತ್ತಾರೆ, ಮತ್ತೊಬ್ಬರು ದೇಶದಲ್ಲೆಲ್ಲಾ ರಾಮಮಂದಿರ ನಿರ್ಮಾಣ ಮಾಡಬೇಕು ಅಂತಾರೆ. ಹಳ್ಳಿ ಹಳ್ಳಿಗಳಲ್ಲೂ ಮಂದಿರ ನಿರ್ಮಾಣವಾಗಬೇಕು ಎನ್ನುವುದು ನಮ್ಮ ಉದ್ದೇಶ. ಆದರೆ, ಕೆಲವರು ಪ್ರಚಾರಕ್ಕೆ ಒಂದನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಿಂದೂ ಕಾರ್ಯಕರ್ತ ಶ್ರೀಕಾಂತ್​ ಪೂಜಾರಿ ಬಂಧನದ ಕುರಿತು ಪ್ರತಿಕ್ರಿಯಿಸಿ, ಪೊಲೀಸರು ಯಾರನ್ನೂ ಉದ್ದೇಶಪೂರ್ವಕವಾಗಿ ಬಂಧಿಸಿಲ್ಲ. ಕೆಲ ದುರ್ಘಟನೆ ನಡೆಯಬಹುದು ಎಂಬ ಗುಮಾನಿ ಮೇಲೆಯೇ ಬಂಧಿಸಲಾಗಿದೆ. ಸರ್ಕಾರ ಕೆಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಹ ಸ್ಪಷ್ಟಪಡಿಸಿದ್ದಾರೆ. ಇದು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮಾಡಿರುವ ಕ್ರಮ ಎಂದು ಸಂಸದ ಡಿ.ಕೆ. ಸುರೇಶ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
