ರಾಮನಗರ:ಒಂದೆಡೆ ರಾಜ್ಯದಲ್ಲಿ ಕರೊನಾ ಸಂಕಷ್ಟ ದಿನೇದಿನೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಬೆಳವಣಿಗೆಗಳೂ ಗರಿಗೆದರಿವೆ.
ಬಿಜೆಪಿ, ಕಾಂಗ್ರೆಸ್ ವಲಯದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಗ ಸಂಸದ ಡಿ.ಕೆ.ಸುರೇಶ್​ ಅವರು ಒಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಬಿಜೆಪಿಯವರೇ ಸರ್ಕಾರವವನ್ನು ಬೀಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.
ಇದನ್ನೂ ಓದಿ:ಪುಲ್ವಾಮಾ ರೀತಿ ದಾಳಿ ನಡೆಸಲು ಸಿದ್ಧನಾಗಿ ಬಂದಿದ್ದ ಉಗ್ರನ ಪತ್ತೆ
ಮಾಗಡಿಯಲ್ಲಿ ನಡೆದ ಕಾಂಗ್ರೆಸ್​ ಸಭೆಯಲ್ಲಿ ಮಾತನಾಡಿದ ಅವರು, ನಾವು ಮಾಗಡಿಯಲ್ಲಿ ಬಾಲಕೃಷ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಟ್ಟುತ್ತೇವೆ. ವಿರೋಧಿಗಳು ಏನೇ ಹೇಳಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷವನ್ನು ಸದೃಢವಾಗಿ ಬೆಳೆಸುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮವನ್ನು ಯಾರಿಂದಲೂ ಅಳಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರಿಂದಲೂ ಕಾಂಗ್ರೆಸ್​ಗೆ ಏನೂ ಮಾಡಲಾಗದು. 20 ಲಕ್ಷ ಕೋಟಿ ರೂ.ಕರೊನಾ ಪ್ಯಾಕೇಜ್​ ಹೆಸರಲ್ಲಿ ಜನರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ನಿರ್ಬಂಧದ ಹೊರತಾಗಿಯೂ ಚೀನಾದಲ್ಲಿ ಕಾಡುಪ್ರಾಣಿಗಳ ಮಾಂಸ ಮಾರಾಟ ಆರಂಭ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 10 =
Remember me
