ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಲಾಗುವುದು ಎಂದು ಘೋಷಿಸಿತ್ತು.
ಇನ್ನು ಸಿಎಂ-ಡಿಸಿಎಂ ಪದಗ್ರಹಣದ ಬಳಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಸಭೆಯಲ್ಲಿ ಮಾತನಾಡುತ್ತಾ ಎಲ್ಲದ್ದಕ್ಕೂ ವರದಿ ಪಡೆಯಬೇಕಾಗುತ್ತದೆ ಸುಮ್ಮನೆ ದಾರೀಲಿ ಹೋಗೋರಿಗೆ ದುಡ್ಡು ಕೊಡುವುದಕ್ಕೆ ಆಗುವುದಿಲ್ಲ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
ಯಾರಿಗೆ ಯೋಜನೆಯನ್ನು ತಲುಪಿಸಬೇಕು ಫಲಾನುಭವಿಗಳು ಯಾರು ಎಂಬುದರ ಕುರಿತು ವರದಿ ಪಡೆದು ಆ ನಂತರ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷ ನೀಡಿರುವ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ ಮುಂದಿನ 5 ವರ್ಷಗಳಲ್ಲಿ ಈಡೇರಿಸುವಂತಹದ್ದು ಎಂದು ಹೇಳಿದ್ಧಾರೆ.
ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳ ಜಾರಿ ಬಗ್ಗೆ ಮಾತು ಕೊಟ್ಟಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಈಗಾಗಲೇ ನಿರ್ಧಾರ ಮಾಡಿದ್ದು, ಮುಂದಿನ ಸಂಪುಟ ಸಭೆಯ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 18 =
Remember me
