ಬೆಂಗಳೂರು:ಇದೀಗ ಮತದಾರರು ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್​ಗೆ ರಾಜ್ಯದ ಅಧಿಕಾರದ ಚುಕ್ಕಾಣಿ ನೀಡಿದ್ದು ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ನಡುವೆ ಇಂದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹುಟ್ಟುಹಬ್ಬವಾಗಿದ್ದು, ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಇಂದು ಡಿಕೆ ಶಿವಕುಮಾರ್ ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್​ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಕಗ್ಗಂಟಾಗಿ ಪರಿಣಮಿಸಿದ್ದು, ಇಂದು ಶಾಸಕಾಂಗ ಪಕ್ಷದ ಸಭೆಯಲ್ಲೂ ಆ ಕುರಿತು ಒಮ್ಮತದ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.
ಡಿಕೆ ಶಿವಕುಮಾರ್ ತಮ್ಮ ಟ್ವೀಟ್​ನಲ್ಲಿ “ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಹಿಂದಿನ ದಿನದಂದು ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
My life is dedicated to serving the people of Karnataka.
On the eve of my birthday, the people of Karnataka gave me the best birthday gift possible.
Thanks to my Congress family for their warm greetings.#JaiKarnatakapic.twitter.com/j6RP30vX8k
— DK Shivakumar (@DKShivakumar)May 14, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
