ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರಲಿದ್ದಾರೆ ಎಂಬುದಕ್ಕೆ ಮತ್ತಷ್ಟು ಇಂಬು ನೀಡಿದೆ.
ಮಾ.12ರಂದು ಡಿಕೆಶಿ ಮನೆಗೆ ಬೇಟಿ ನೀಡಿದ್ದ ಜೆಡಿಎಸ್​ನ ಮಾಜಿ ಶಾಸಕ ಮಧುಬಂಗಾರಪ್ಪ, ನಾನು ಮಾತ್ರವಲ್ಲ ನನ್ನ ಅಕ್ಕ ನನ್ನ ಅಕ್ಕ ಗೀತಾ ಶಿವರಾಜ್​ಕುಮಾರ್​ ಕೂಡ ಕಾಂಗ್ರೆಸ್​ಗೆ ಬರಲಿದ್ದಾರೆ. ಮಾತುಕತೆ ಆಗಿದೆ. ಬಂದಿದ್ದಾರೆ ಅಂದುಕೊಳ್ಳಿ. ಡಿಕೆಶಿ ಅಧ್ಯಕ್ಷತೆಯಲ್ಲಿ ಕೆಲಸ ಮಾಡೋ ಅವಕಾಶ ಸಿಕ್ಕಿದೆ ಎಂದಿದ್ದರು. ಇಂದು ನಟ ಶಿವರಾಜ್​ ಕುಮಾರ್​ ಅವರೇ ಖುದ್ದು ಡಿಕೆಶಿ ಮನೆಗೆ ಭೇಟಿ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಶಿವರಾಜ್ ಕುಮಾರ್ ಕುಟುಂಬ ಮತ್ತು ನಮ್ಮ ಕುಟುಂಬದ ನಡುವೆ ಆತ್ಮೀಯತೆ ಇದೆ. ಅವರು ಏನಕ್ಕೆ ಬಂದಿದ್ದರು? ಯಾವ ವಿಚಾರ ಮಾತಾಡಿದ್ವಿ ಅಂತಾ ಡಿಸ್​ಕ್ಲೋಸ್ ಮಾಡಲ್ಲ. ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನಾನು ಮಾತಾಡಲ್ಲ. ಮಧುಬಂಗಾರಪ್ಪ ಮಾತಾಡಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ತಾರಾ? ಎಂಬುದರ ಬಗ್ಗೆ ನೀವೆ ಕಾದು ನೋಡಿ ಎಂದರು.
ಮಧುಬಂಗಾರಪ್ಪ ಜತೆ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರ್ಪಡೆ!

ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + 3 =
Remember me
