
ಬೆಂಗಳೂರು:ಎತ್ತಿನಹೊಳೆ ಯೋಜನೆಗೆ ಅಗತ್ಯವಾಗಿರುವ 500 ಎಕರೆಯನ್ನು ಹಸ್ತಾಂತರ ಮಾಡಿಕೊಡಲು ಅರಣ್ಯ ಇಲಾಖೆ ಒಪ್ಪಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ ಎಂದರು.ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದರು.260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ.ರೈತರಿಗೆ 51 ಕೋಟಿ ರೂ ಪರಿಹಾರ ನೀಡಬೇಕಾಗಿದ್ದು, ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು.ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದರು.ಬಿಎಸ್‌ವೈ ಪ್ರಕರಣ ಮಾಹಿತಿ ಇಲ್ಲ:ಪೋಕ್ಸೋ ಪ್ರಕರಣದಡಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಧನಕ್ಕೆ ಕೋರ್ಟ ವಾರೆಂಟ್ ಜಾರಿ ಮಾಡಿರುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಗೃಹ ಸಚಿವಾಲಯ ಈ ವಿಚಾರವನ್ನು ನಿಭಾಯಿಸಲಿದೆ ಎಂದರು.
ನಟ ದರ್ಶನ್ ಪ್ರಕರಣ:ಚಿತ್ರನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗಿದ್ದರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದರು.ಸಾರ್ವಜನಿಕರು ಹೋಗಿ ದೂರು ನೀಡಲು ಆಗುತ್ತಿಲ್ಲ ಎಂದು ಕೇಳಿದಾಗ, ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಇದೆಲ್ಲವೂ ನನಗೆ ಹೊಸ ಮಾಹಿತಿ ಎಂದರು.ದರ್ಶನ್ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ ಎಂದರು.ಈ ಪ್ರಕರಣ ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯಿಸಿ, ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದರು.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
