
ಬೆಂಗಳೂರು:ಕೇಂದ್ರ ನೀಡಿರುವ ಬರ ಪರಿಹಾರ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಹೆಚ್ಚಿನ ಪರಿಹಾರಕ್ಕಾಗಿ ಆಗ್ರಹಿಸಿ ನಮ್ಮ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕೇಳಿದ್ದು 18,172 ಸಾವಿರ ಕೋಟಿ ರೂ ಪರಿಹಾರ. ಆದರೆ ಕೇಂದ್ರ ಕೊಟ್ಟಿರುವುದು ಕೇವಲ 3454 ಕೋಟಿ ಮಾತ್ರ. ಕೇಂದ್ರ ಸರ್ಕಾರದ ವಿರುದ್ದ ಭಾನುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಗ್ರಹ ಮಾಡಲಾಗುವುದು ಎಂದು ಹೇಳಿದರು.ನಿಜವಾಗಿ ನಷ್ಟ ಆಗಿರುವುದು 35 ಸಾವಿರ ಕೋಟಿ. ಮೊದಲ ಕಂತಲ್ಲಿ 18 ಸಾವಿರ ಕೋಟಿ ಕೇಳಿದ್ದೆವು. ಅರ್ಧದಷ್ಟಾದರೂ ಕೊಡುತ್ತಾರೆ ಎನ್ನುವ ಭರವಸೆ ಈಡೇರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು.ಸುಪ್ರೀಂ ಕೋರ್ಟ್‌ಗೆ ಹೋದ ಮೇಲೆ ರಾಜ್ಯಕ್ಕೆ ಸ್ವಲ್ಪ ನ್ಯಾಯ ಸಿಕ್ಕಿದೆ. ಇದನ್ನೆ ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ. ಇಂತಹ ಹೇಳಿಕೆ ಕೊಟ್ಟಿರುವ ಕುಮಾರಸ್ವಾಮಿ ನಾಡದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ನರೆಗಾ ಯೋಜನೆಯಲ್ಲಿ 100 ದಿನಗಳ ಕೂಲಿ ದಿನಗಳನ್ನು 150ಕ್ಕೆ ಏರಿಕೆ ಮಾಡಬೇಕು ಎಂಬ ಅವಕಾಶವಿದ್ದರೂ ಕೇಂದ್ರ ಸರ್ಕಾರ ಮಾಡಿಲ್ಲ. ಬರ ಪರಿಹಾರ ಬಗ್ಗೆ ಸಿಎಂ ಹಾಗೂ ಕಂದಾಯ ಸಚಿವರು ಖುದ್ದು ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗದೆ ಇದ್ದಾಗ ಕೋರ್ಟ್ ಮೆಟ್ಟಿಲೇರಲಾಗಿತ್ತು. ಕೋರ್ಟ್ ನೀಡಿದ ಮಾತಿನಂತೆ ಹಣ ಕೊಟ್ಟಿದ್ದಾರೆ ಹೊರತು ಇದು ಬಿಜೆಪಿ ಅಥವಾ ಅವರ ಸಂಸದರ ಹೋರಾಟದಿಂದ ಬಂದಿದ್ದು ಅಲ್ಲ ಎಂದರು.ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5400 ಕೋಟಿ ಘೋಷಣೆ ಮಾಡಿದರೂ ರಾಜ್ಯಕ್ಕೆ ಹಣ ಯಾಕೆ ನೀಡಲಿಲ್ಲ. ಮಹಾದಾಯಿ, ಎತ್ತಿನಹೊಳೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲಿಲ್ಲ. ಈಗ ಕುಮಾರಸ್ವಾಮಿ ಅವರು ಗೆದ್ದರೆ ಒಂದೇ ತಿಂಗಳಲ್ಲಿ ಮೋಕೇದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎನ್ನುತ್ತಾರೆ. ನೀವು ಅವರ ಜತೆ ಕೈಜೋಡಿಸಿದ ದಿನವೇ ಮೇಕೆದಾಟು ಯೋಜನೆಗೆ ಸಹಿ ಹಾಕಿಸಬಹುದಿತ್ತಲ್ಲವೇ? ಎಂದು ಕೇಳಿದರು.ಕೇಂದ್ರದಿಂದ ನಾವು ಭಿಕ್ಷೆ ಕೇಳುತ್ತಿಲ್ಲ. ಇದು ನಮ್ಮ ಹಕ್ಕು, ಅದನ್ನು ಕೇಳುತ್ತಿದ್ದೇವೆ. ಇದನ್ನು ನೀಡುವುದು ಕೇಂದ್ರದ ಕರ್ತವ್ಯ ಎಂದು ಹೇಳಿದರು.
ಎರಡಂಕಿ ದಾಟುತ್ತೇವೆಒಂದೆರಡು ಬೂತ್‌ಗಳಲ್ಲಿ ಚಿಕ್ಕ ಗಲಾಟೆ ಬಿಟ್ಟರೆ ರಾಜ್ಯದಲ್ಲಿ ಶಾಂತಿಯುತ ಮತದಾನ ಆಗಿರುವುದಕ್ಕೆ ಧನ್ಯವಾದ ಸಲ್ಲಿಸುವೆ. ಮೊದಲ ಹಂತದಲ್ಲಿ ನಾವು ಎರಡಂಕಿ ಸ್ಥಾನ ಗೆಲ್ಲುತ್ತೇವೆ ಎಂದರು.ದೇವೇಗೌಡರು ಪಕ್ಷದ ನಾಯಕರು. ಅವರೇ ಬಿಜೆಪಿ ಪಕ್ಷದ ನಾಯಕರು ಹಾಸನ ಮತ್ತು ಮಂಡ್ಯದಲ್ಲಿ ಸಹಕಾರ ಕೊಟ್ಟಿಲ್ಲ, ಮೈತ್ರ ಧರ್ಮ ಪಾಲನೆ ಮಾಡಿಲ್ಲ ಅಂತಾ ಯಾಕೆ ಹೇಳಿದ್ದಾರೆ. ಅಂದರೆ, ಮೈತ್ರಿ ಧರ್ಮ ಎಲ್ಲೂ ಪಾಲನೆ ಆಗಿಲ್ಲ ಎಂದರ್ಥ ಎಂದರು.
ಪೆನ್ ಡ್ರೈವ್ ಕಥೆ ಗೊತ್ತಾಯ್ತುಹಾಸನ ಸಂಸದನ ಬಗ್ಗೆ ಬರುತ್ತಿರುವ ವಿಷಯ ನಾನು ನಿಮಗೆ ಹೇಳಬೇಕಾಗಿಲ್ಲ. ನನಗೂ ಯಾರೋ ತೋರಿಸಿದ್ದಾರೆ. ಕುಮಾರಣ್ಣ ನನ್ನ ಹತ್ರ ಪೆನ್ ಡ್ರೈವ್ ಇದೆ ಎಂದು ಮೊದಲೆಲ್ಲ ಹೇಳುವಾಗಅದು ಏನು ಎಂದು ಗೊತ್ತಿರಲಿಲ್ಲ. ಈಗ ಅದರಲ್ಲಿ ಏನಿದೆ ಎಂದು ಗಾತ್ತಾಯಿತು.ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಡಾ.ಅಶ್ವತ್ಥನಾರಾಯಣ ಅವರು ಈ ಬಗ್ಗೆ ಉತ್ತರ ನೀಡಬೇಕು ಎಂದು ಸವಾಲು ಹಾಕಿದರು.ಮಹಿಳಾ ಆಯೋಗ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ಈ ಬಗ್ಗೆ ಇನ್ನೂ ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ ಎಂದರು.
ಕುಮಾರಸ್ವಾಮಿಗೆ ಸವಾಲುಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಅವರಿಗೆ ಒಳ್ಳೆಯದಾಗುತ್ತಾ ಎಂದು ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಮಾತನಾಡಿದ್ದಾರೆ ಎಂದು ಕೇಳಿದಾಗ, ಅವರು ನನ್ನ ಹೆಸರು ಹೇಳಿ ಮಾತನಾಡಲಿ. ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ಮುಡಿಮುತ್ತುಗಳನ್ನು ಹೇಳುತ್ತೇನೆ ಎಂದರು.
ಶಾಸಕರು ಮಂತ್ರಿಗಳಿಗೆ ಜವಾಬ್ದಾರಿ:ಎಲ್ಲಾ ಶಾಸಕರು ಮಂತ್ರಿಗಳಿಗೆ ಉತ್ತರ ಕರ್ನಾಟಕ ರಾಜ್ಯಗಳಿಗೆ ಜವಾಬ್ದಾರಿ ನೀಡಿದ್ದೇವೆ. ಎಲ್ಲರೂ ಹೋಗಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳಲು ನೀಡಿದ್ದೇವೆ. ನಾನು ನಾಳೆಯಿಂದ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nineteen =
Remember me
