
ಕನಕಪುರ:ಸರಳ, ಸಜ್ಜನಿಕೆಯ ಹಾಗೂ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಗುಣವಿರುವ ಬೆಂಗಳೂರು ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರ ಗೆಲುವಿಗೆ ಕಾರ್ಯಕರ್ತರು ಕಂಕಣಬದ್ಧರಾಗಿ ಶ್ರಮಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.ಶುಕ್ರವಾರ, ಕನಕಪುರದಲ್ಲಿ ನಡೆದ ಕನಕಪುರ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಅನುಷ್ಠಾನದ ಜತೆಗೆ ರಾಮೋಜಿಗೌಡರು ಇಲ್ಲಿಯವರೆಗೆ ಕೈಗೊಂಡ ಕಾರ್ಯಗಳ ಕುರಿತು ಹಾಗೂ ಅವರು ಮುಂದೆ ಕೈಗೊಳ್ಳುವ ಉದ್ಯೋಗ ಮೇಳದಂತಹ ಜನೋಪಯೋಗಿ ಕಾರ್ಯಗಳ ಕುರಿತು ಪದವೀಧರ ಮತದಾರರಿಗೆ ಮನವರಿಕೆ ಮಾಡಿಸಬೇಕು ಎಂದರು.ನನ್ನ ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ ಅವರ ಚುನಾವಣೆಯಲ್ಲಿ ದುಡಿದಂತೆ ಕಾರ್ಯಕರ್ತರು ರಾಮೋಜಿಗೌಡರ ಚುನಾವಣೆಯನ್ನು ನಿರ್ವಹಿಸಬೇಕು ಎಂದರು. ಪ್ರತಿ ಮತದಾರರನ್ನು ಗುರುತಿಸಿ ಅವರನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕು ಎಂದರು.ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸರ್ಕಾರದ ಮಧ್ಯೆ ಸಮನ್ವಯ ಸಾಧಿಸಲು ಕಾರ್ಯಕರ್ತರ ಕೆಲಸ ಆಗುವ ದೃಷ್ಟಿಯಿಂದ ಪ್ರತಿ ತಿಂಗಳು ಕಾಂಗ್ರೆಸ್ ಕುಟುಂಬ ಕಾರ್ಯಕ್ರಮ ಕಟ್ಟುನಿಟ್ಟಾಗಿ ಅನುಷ್ಟಾನ ಗೊಳಿಸಲಾಗುವುದು ಎಂದರು.ಕನಕಪುರ ಮತಕ್ಷೇತ್ರದಲ್ಲಿಯೇ ನನ್ನ ಕುಟುಂಬದ ಪದವೀಧರರೆಲ್ಲಾ ಮತಚಲಾಯಿಸಲಿದ್ದೇವೆ ಎಂದರು.ಇಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸುವುದರಿಂದ ವಿಧಾನ ಪರಿಷತ್‌ನಲ್ಲಿ ನಮ್ಮ ಸಂಖ್ಯಾಬಲ ಹೆಚ್ಚಳವಾಗಿ, ಸರ್ಕಾರ ಇನ್ನಷ್ಟು ಸೂಸುತ್ರವಾಗಿ ನಡೆಯಲು ಸಾಧ್ಯವಾಗಲಿದೆ ಎಂದರು.ಸಂಸದ ಡಿ.ಕೆ. ಸುರೇಶ ಮಾತನಾಡಿ, ಮತಕ್ಷೇತ್ರದಾದ್ಯಂತ ಹೆಚ್ಚಿನ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಆಯ್ಕೆ ಮಾಡುವ ಹೊಣೆ ಕಾರ್ಯಕರ್ತರ ಮೇಲಿದೆ ಎಂದರು.ಬೆಂಗಳೂರು ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮಾತನಾಡಿ, ಪಕ್ಷ ಹಾಗೂ ಸರ್ಕಾರ ನನ್ನ ಪರವಾಗಿ ಬೆಂಬಲಕ್ಕೆ ನಿಂತಿದ್ದು , ಡಿ.ಕೆ. ಶಿವಕುಮಾರ ಅವರು ತಮ್ಮ ಬಿಡುವಿಲ್ಲದ ಕಾರ್ಯಕ್ರಮ ಮಧ್ಯೆಯೂ ಮುತುವರ್ಜಿ ವಹಿಸಿ ಚುನಾವಣೆ ಬಗ್ಗೆ ವಿಶೇಷ ಗಮನಹರಿಸಿದ್ದು ನನಗೆ ಆನೆ ಬಲ ಬಂದಿದೆ ಎಂದರು.ಸಿಎಂ ಸೇರಿದಂತೆ ಹಲವು ಸಚಿವರು ವಿಚಾರಿಸಿ ಸಲಹೆ ಸೂಚನೆ ನೀಡುತ್ತಿದ್ದಾರೆ. ಆಯಾ ಕ್ಷೇತ್ರದ ಶಾಸಕರು ತಮ್ಮ ಮತಕ್ಷೇತ್ರದಲ್ಲಿ ತಮ್ಮದೇ ಚುನಾವಣೆ ಎನ್ನುವ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವುದು ನನ್ನ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಸ್ಥಳೀಯ ನಾನಾ ಸಂಘಟನೆಯ ಮುಖಂಡರು ಸಾವಿರಾರು ಸಂಖ್ಯೆಯಲ್ಲಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
