ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಪ್ರಚಂಡ ದಿಗ್ವಿಜಯ ಸಾಧಿಸಿದ್ದು ನಾಯಕರು ಹಾಗೂ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದು ಮಾತನಾಡುವ ವೇಳೆ ಭಾವುಕರಾಗಿದ್ದಾರೆ.
ಇನ್ನು ಈ ಕುರಿತು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಪಕ್ಷದ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ನನ್ನ ಸಾಷ್ಟಾಂಗ ನಮಸ್ಕಾರಗಳು.
ಮಾತನಾಡುವ ವೇಳೆ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಭಾವುಕರಾದ ಡಿಕೆಶಿ ಪಕ್ಷದ ನಾಯಕರು ತಮ್ಮ ಬೆಂಬಲಕ್ಕೆ ನಿಂತಿದ್ದನ್ನು ಸ್ಮರಿಸಿದರು.
ಇದನ್ನೂ ಓದಿ:ಆರು ಬಾರಿ ಗೆದ್ದು ಬೀಗಿದ್ದ ಕಾಗೇರಿಗೆ ಸೋಲುಣಿಸಿದ ಕಾಂಗ್ರೆಸ್​​ ಅಭ್ಯರ್ಥಿ ಭೀಮಣ್ಣ ನಾಯ್ಕ
ಇದೇ ವೇಳೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ನಾಯಕರು ತಾವು ಜೈಲಿಗೆ ಹೋದ ಸಂದರ್ಭದಲ್ಲಿ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ.
ಇನ್ನು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​. ಅಶೋಕ್​ ವಿರುದ್ಧ 1 ಲಕ್ಷಗಳ ಅಂತರದಲ್ಲಿ ಭರ್ಜರಿ ಜಯಸಾಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ತಾವು ರಾಮನಗರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
