ರಾಮನಗರ:ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕಾರ್ಯಕ್ರಮಕ್ಕೆ ಆಹ್ವಾನ ನೀಡದೇ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಆರೋಪ ಇದೀಗ ಕೇಳಿ ಬಂದಿದೆ. ಸಂಸದ ಡಿ.ಕೆ.ಸುರೇಶ್ ತಮಗೆ ಆಹ್ವಾನ ನೀಡದೇ ಇರುವುದಕ್ಕೆ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ನಾನು ಪ್ರಧಾನಿಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ ಎಂದು ಸಂಸದ ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಸುಮಾರು 30% ಕಾಮಗಾರಿಯ ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ. ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್​ಗಾಗಿ ಉದ್ಘಾಟಿಸಿದ್ದೀರಿ. 2013ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೆಸರನ್ನು ಉಲ್ಲೇಖಿಸಿ ಡಿ.ಕೆ.ಸುರೇಶ್ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ.
ಇದನ್ನೂ ಓದಿ:ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುವ ಮೂಲಕ ಜನರ ಪ್ರೀತಿಯ ಋಣ ತೀರಿಸುತ್ತೇನೆ; ಪ್ರಧಾನಿ ಮೋದಿ
ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂತಿದೆ. ಈ ಕುರಿತು ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ ಎಂದು ಸರಣಿ ಟ್ವೀಟ್ ಮೂಲಕ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಮೈ-ಬೆಂ ಹೆದ್ದಾರಿ ನಿರ್ಮಾಣದ ಕ್ರೆಡಿಟ್ ಪಾಲಿಟಿಕ್ಸ್ ವಿಚಾರ: ಜ್ಯೋತಿಷಿ ಕತೆ ಹೇಳಿ ಸುಮಲತಾ ತಿರುಗೇಟು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + twenty =
Remember me
