ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ರಂಗೇರಿದ್ದು ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು ಗೆಲ್ಲಲು ಉಭಯ ಪಕ್ಷಗಳು ಜಿದ್ದಾಜಿದ್ದಿ ಹೋರಾಟ ನಡೆಸುತ್ತಿವೆ.
ಹೀಗಾಗಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಇಬ್ಬರು ನಾಯಕರು ಆಪರೇಷನ್​ಗೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕುಳಿತುಕೊಂಡು ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಮಂಡ್ಯ, ತುಮಕೂರಿನಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ಗಾಳ ಹಾಕುತ್ತಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಗೆ ದಾಖಲಾದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌
ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಹಿರಿಯ ನಾಯಕರಾದ ನಿಂಗಪ್ಪ ಅವರು ಪಕ್ಷಕ್ಕೆ ಮರಳುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದಿದ್ದಾರೆ.
ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ನಿಂಗಪ್ಪ ಅವರು ಪಕ್ಷಕ್ಕೆ ಸೇರಲಿದ್ದಾರೆ. ಈಗಾಗಲೇ ಅವರು ನನ್ನ ಜತೆ ಮಾತುಕತೆ ನಡೆಸಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿಸಿದ್ದಾರೆ. ಮಾಜಿ ಶಾಸಕ ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಆಸ್ಪತ್ರೆಗೆ ದಾಖಲಾದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
