ಬೆಂಗಳೂರು:ಕರೊನಾ ಲಕ್ಷಣವಿಲ್ಲದ ಅಥವಾ ಅಲ್ಪ ಲಕ್ಷಣವುಳ್ಳವರನ್ನು ಆಸ್ಪತ್ರೆಗಳಿಗೆ ದಾಖಲಿಸಿಕೊಳ್ಳಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ರೋಗಿಗಳನ್ನು ಕೋವಿಡ್ ಕೇರ್ ಸೆಂಟರ್ ಅಥವಾ ಹೋಂ ಐಸೋಲೇಷನ್ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪಾಲಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಿಎಂ ಚರ್ಚೆ ನಡೆಸಿದ್ದು, ಒಂದು ವಾರದೊಳಗೆ ಹೆಚ್ಚುವರಿ 3,000 ಹಾಸಿಗೆಗಳು ಸೇರ್ಪಡೆಯಾಗಲಿವೆ ಎಂದರು.
ಮುಖ್ಯಮಂತ್ರಿ ಕರೆದಿದ್ದ ಸಭೆಗೆ ಗೈರಾಗಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕರೊನಾ ಮತ್ತು ಕರೊನೇತರ ಕಾಯಿಲೆಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಅನಿವಾರ್ಯ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಈಗ 85 ಕರೊನಾ ಲ್ಯಾಬ್​ಗಳಿದ್ದು ಮುಂದಿನ ದಿನಗಳಲ್ಲಿ ಇನ್ನೂ 25 ಲ್ಯಾಬ್ ಸ್ಥಾಪಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ 50,000 ಆರ್​ಟಿಪಿಸಿಆರ್ ಟೆಸ್ಟ್​ಗಳನ್ನು ಪ್ರತಿದಿನ ನಡೆಸುವ ಗುರಿ ಹೊಂದಲಾಗಿದೆ. ಇದುವರೆಗೆ 9.8 ಲಕ್ಷ ಟೆಸ್ಟ್ ನಡೆಸಲಾಗಿದ್ದು ಕೆಲವೇ ರಾಜ್ಯಗಳು ನಮಗಿಂತ ಹೆಚ್ಚು ಟೆಸ್ಟ್ ನಡೆಸಿವೆ ಎಂದರು.
ರಾಜ್ಯದಲ್ಲಿ 300 ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ 10 ಲಕ್ಷ ಆಂಟಿಜೆನ್ ಕಿಟ್​ಗಳಿಗೆ ಆರ್ಡರ್ ನೀಡಲಾಗಿದೆ. ಟೆಸ್ಟ್ ನಡೆಸುವಲ್ಲಿ ಮೊದಲ 10 ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು ಸುಧಾಕರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fourteen =
Remember me
