
ಬೆಂಗಳೂರು:ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ನಿರ್ಮಿಸಿರುವ ವಿಗ್ರಹವನ್ನು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ‘ಪ್ರಾಣ ಪ್ರತಿಷ್ಠೆ’ಗೆ ಅಂತಿಮಗೊಳಿಸಿರುವ ಭಗವಾನ್ ರಾಮನ ವಿಗ್ರಹದ ಚಿತ್ರವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ, ಮೈಸೂರಿನ ಶಿಲ್ಪಿ ಅರುಣ್​ ಯೋಗಿರಾಜ್ ಬಗ್ಗೆಯೂ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಯಾರು  ಈ ಅರುಣ್​ ಯೋಗಿರಾಜ್​ ಎಂದು ನೆಟ್ಟಿಗರು ಸೋಶಿಯಲ್​ ಮೀಡಿಯಾದಲ್ಲಿ ಹುಡುಕಾಡುತ್ತಿದ್ದಾರೆ.
ಅರುಣ್ ಯೋಗಿರಾಜ್ ಯಾರು? :ಅರುಣ್ ಯೋಗಿರಾಜ್ ತಂದೆ, ತಾತ, ಮುತ್ತಾತ, ಅವರ ತಂದೆ ಹಾಗೂ ತಾತ, ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ಯೋಗಿರಾಜ್ ಅವರ ಕುಟುಂಬ ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ಪರಂಪರೆ ಹೊಂದಿದೆ.
ಅರುಣ್ ಯೋಗಿರಾಜ್ ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು.
ಅರುಣ್ ಯೋಗಿರಾಜ್ ಎಂಬಿಎ ಪಧವಿದರ  ಆಗಿದ್ದಾನೆ. ವಿದ್ಯಾಭ್ಯಾಸ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡಿದ್ದಾರೆ. ಆದರೆ ಅವರಿಗೆ ಆ ಕೆಲದ ತೃಪ್ತಿ ನೀಡಲಿಲ್ಲ. ಆಗ ಅವರಿಗೆ, ತಮ್ಮ ಪೂರ್ವಜರ ಕಲೆಯನ್ನು ಮುಂದುವರಿಸಿದ್ದಾರೆ. ಅರುಣ್ ಯೋಗಿರಾಜ್ 2008ರಿಂದ ಮತ್ತೆ ಶಿಲ್ಪ ಕೆತ್ತನೆ ವೃತ್ತಿ ಮುಂದುವರಿಸಿದರು.
ದೆಹಲಿಯ ಇಂಡಿಯಾ ಗೇಟ್ ಬಳಿಯ ಅಮರ್ ಜವಾನ್ ಜ್ಯೋತಿಯ ಹಿಂದೆ ಸ್ಥಾಪಿಸಲಾಗಿರುವ ಸುಭಾಷ್ ಚಂದ್ರ ಬೋಸ್ ಅವರ 30-ಅಡಿ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದೂ ಸೇರಿದಂತೆ ಹಲವು ಪ್ರಮುಖ ಪ್ರತಿಮೆ ನಿರ್ಮಾಣಗಳಲ್ಲಿ ಅರುಣ್ ಅವರ ಶ್ರಮವಿದೆ. ಕೇದಾರನಾಥದ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಶಿಲ್ಪ ಮತ್ತು ಮೈಸೂರಿನ 21 ಅಡಿ ಎತ್ತರದ ಹನುಮಾನ್ ಪ್ರತಿಮೆ ಕೂಡ ಅರುಣ್ ಯೋಗಿರಾಜ್ ಕೆತ್ತನೆಯಲ್ಲಿ ಮೂಡಿಬಂದಿರುವುದು ಗಮನಾರ್ಹ.
https://twitter.com/JoshiPralhad/status/1741868129289138340/history
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿರುವ ಸಂಗತಿ ಇದೀಗ ರಾಜ್ಯಕ್ಕೆ ಹೆಮ್ಮೆ ತಂದಿದ್ದು, ಈ ಕುರಿತಂತೆ ಬಿಜೆಪಿ ನಾಯಕರು ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಮಹಾಭಿಷೇಕ ಸಮಾರಂಭಕ್ಕೂ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್​ ಮಾಡಿ, ಅರುಣ್ ಅವರಿಗೆ ಶ್ಲಾಘಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್​ಗೆ ಕೇಂದ್ರ ಸಚಿವರು ಹೇಳಿದ್ದಿಷ್ಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
