ಬೆಂಗಳೂರು:ಮುಂಗಾರು ಮಳೆ ನಟಿ ಮಳೆ ಹುಡುಗಿ ಎಂದೆ ಖ್ಯಾತಿ ಪಡೆದಿರುವ ನಟಿ ಪೂಜಾ ಗಾಂಧಿ ನಾಳೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ  ಅವರ ಆಪ್ತರು ಹಲಯದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದು ಮದುವೆ ಕುರಿತಾದ ಮಾಹಿತಿಯನ್ನು ಖಚಿತ ಪಡಿಸಿದ್ದಾರೆ.  ಪೂಜಾ ಗಾಂಧಿ ಅವರ ಕೈ ಹಿಡಿಯುತ್ತಿರುವ ವರ ಯಾರು ಎಂದು ಅಭಿಮಾನಿಗಳು ಹುಡುಕಾಡುತ್ತಿದ್ದಾರೆ.
ಉದ್ಯಮಿ ವಿಜಯ್ ಘೋರ್ಪಡೆ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ವಿಜಯ್ ಅವರೇ ಪೂಜಾ ಗಾಂಧಿಗೆ ಕನ್ನಡ ಕಲಿಸಿದ್ದರು ಎನ್ನಲಾಗಿದೆ. ಈಗ ಇಬ್ಬರೂ ತಮ್ಮ ಪ್ರೀತಿಗೆ ಮದುವೆ ಎನ್ನುವ ಅರ್ಥ ನೀಡುತ್ತಿದ್ದಾರೆ.  ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ.  29 ನವೆಂಬರ್ 2023ರಂದು ಬೆಂಗಳೂರಿನ ಯಲಹಂಕದಲ್ಲಿ  ಕನ್ನಡಿಗನ ಕೈ ಹಿಡಿದು ಕರ್ನಾಟಕದ ಸೊಸೆ‌ ಆಗಲು ಉತ್ತರ ಭಾರತದ ಬೆಡಗಿ ಪೂಜಾ ಗಾಂಧಿ ಮುಂದಾಗಿದ್ದಾರೆ.

ವರ ಯಾರು ಗೊತ್ತಾ?: ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಜತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು.
ಪೂಜಾ ಗಾಂಧಿ ಅವರು ಮೂಲತಃ ಉತ್ತರ ಪ್ರದೇಶದ ಬೆಂಗಾಲಿ ಕುಟುಂಬದವರು. ಹುಟ್ಟಿದ್ದು ಉತ್ತರಪ್ರದೇಶದ ಮೀರತ್‌, ಬೆಳೆದಿದ್ದು ಓದಿದ್ದು  ದೆಹಲಿಯಲ್ಲಿ ಎನ್ನಲಾಗಿದೆ.‘ಮುಂಗಾರು ಮಳೆ’ ಸಿನಿಮಾ ಗೆದ್ದ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಹಲವು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದಾರೆ. ಸಿನಿಮಾ, ರಾಜಕೀಯ ಕ್ಷೇತ್ರದಲ್ಲೂ ಪೂಜಾ ಗಾಂಧಿ ಗುರುತಿಸಿಕೊಂಡಿದ್ದಾರೆ. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ.
ಮುಂಗಾರು ಮಳೆ ನಟಿಗೆ ಕೂಡಿ ಬಂದ ಕಂಕಣ ಭಾಗ್ಯ; ಕನ್ನಡ ಕಲಿಸಿದ ಗುರುವನ್ನೇ ವರಿಸಲಿದ್ದಾರೆ ಪೂಜಾ ಗಾಂಧಿ ಮದುವೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 2 =
Remember me
