ಬೆಂಗಳೂರುಉತ್ತಮ ಆರೋಗ್ಯಕ್ಕಾಗಿ ತಮ್ಮ ಆಹಾರ ಕ್ರಮ ಮತ್ತು ಜೀವನಶೈಲಿಯನ್ನು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲಾಡಳಿತ, ಭಾರತೀಯ ರೆಡ್‌ಕ್ರಾಸ್ ಸಹಯೋಗದಲ್ಲಿ ಮಲ್ಲೇಶ್ವರ ಲೇಡೀಸ್ ಅಸೋಸಿಯೇಷನ್ (ಎಂಎಲ್‌ಎ) ಕಾಲೇಜಿನಲ್ಲಿ ಶುಕ್ರವಾರ ಆಯೋಚಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಕರು ಮೊಬೈಲ್ ಗೀಳು ಹತ್ತಿಸಿಕೊಂಡಿದ್ದು, ಗಂಟೆಗಟ್ಟಲೆ ಮೊಬೈಲ್‌ನಲ್ಲಿಯೇ ಮುಳುಗಿರುತ್ತಾರೆ. ಇದು ಮಾನಸಿಕ, ದೈಹಿಕ ಮತ್ತು ಭಾವನಾತ್ಮಕವಾಗಿ ಪರಿಣಾಮ ಬೀರಲಿದೆ. ವಿದ್ಯಾರ್ಥಿಗಳು ತಮ್ಮ ಸಾಧನೆ, ಕೆಲಸ ಮತ್ತು ಯಶಸ್ಸಿನ ಕಡೆ ಗಮನ ಹರಿಸಬೇಕು. ಅನಗತ್ಯವಾಗಿ ಕಾಲಹರಣ ಮಾಡುವುದನ್ನು ಕಡಿಮೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಂಎಲ್‌ಎ ಕಾಲೇಜು ಭವ್ಯವಾದ ಇತಿಹಾಸವನ್ನು ಹೊಂದಿದೆ. ಸರ್ಕಾರದ ವತಿಯಿಂದ ಕಾಲೇಜಿಗೆ ಬೇಕಾಗುವ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿರುವ ಭಾರತದಲ್ಲಿಯೇ ರಕ್ತದಾನಕ್ಕೆ ಕೊರತೆಯಾಗುವುದು ಸರಿಯಲ್ಲ. ಪ್ರತಿಯೊಬ್ಬರೂ ಜೀವ ರಕ್ಷಕವಾದ ರಕ್ತದಾನಕ್ಕೆ ಮುಂದಾಗಬೇಕು.ಆದರೆ, ಸ್ವಾರ್ಥದ ಜೀವನದಲ್ಲಿ ಕಾಳಜಿ ಕಡಿಮೆಯಾಗುತ್ತಿದೆ. ವಿದ್ಯಾವಂತರು, ಜ್ಞಾನವಂತರೆನಿಸಿಕೊಂಡವರಿಗೇ ಇದು ಮನವರಿಕೆಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಹಲವು ಬಾರಿ ರಕ್ತ ದಾನ ಮಾಡಿರುವ ದಾನಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ 25ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ರಕ್ತ ದಾನ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಲಕ್ಷ್ಮೀ ವಿ. ನಾಗೇಶ್ವರ, ಪ್ರಾಂಶುಪಾಲೆ ಡಾ. ಪದ್ಮಜ, ರೆಡ್‌ಕ್ರಾಸ್ ಬೆಂಗಳೂರು ಜಿಲ್ಲೆಯ ಸಭಾಪತಿ ಬಾಲಕೃಷ್ಣಶೆಟ್ಟಿ ಎಬಿ, ಸಂಚಾಲಕ ಎಂ.ಎಸ್. ರಾಜೇಶ್ ಸೇರಿ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
