ಬೆಂಗಳೂರು:ಹಲವಾರು ವರ್ಷಗಳ ಕಾಲ ನೇಪಥ್ಯಕ್ಕೆ ಸರಿದು ಈಗಷ್ಟೇ ಮತ್ತೆ ಚಿತ್ರರಂಗದಲ್ಲಿ ಹಾಗೂ ರಾಜಕೀಯದಲ್ಲಿ ಸಕ್ರಿಯವಾಗಿರುವ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಯೊಂದು ವಿಷಯಕ್ಕೂ ಪ್ರತಿಕ್ರಿಯಿಸಲು ಪ್ರಾರಂಭಿಸಿದ್ದಾರೆ.
ಇದೀಗ ಚಿತ್ರರಂಗದ ಜತೆ ಹಲವಾರು ದಶಕಗಳಿಂದ ನಂಟು ಹೊಂದಿರುವ ಲಹರಿ ಸಂಸ್ಥೆ ಮುಖ್ಯಸ್ಥ ವೇಲು ಅವರ ವಿರುದ್ಧ ಕಿಡಿಕಾಡಿದ್ದಾರೆ ರಮ್ಯಾ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಹಿನ್ನೆಲೆಯಲ್ಲಿ ಲಹರಿ ವೇಲು ವಿರುದ್ಧ ರಮ್ಯಾ ಸಿಟ್ಟಾಗಿದ್ದಾರೆ.

ಯಾತ್ರೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಹಾಡನ್ನು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಬಳಸಿತ್ತು. ಅದರ ವಿರುದ್ಧ ಲಹರಿ ವೇಲು, ಹಕ್ಕು ಸ್ವಾಮ್ಯ ಕಾಯ್ದೆ (ಕಾಪಿ ರೈಟ್) ಉಲ್ಲಂಘನೆ ದೂರು ದಾಖಲಿಸಿದ್ದರು. ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದರಿಂದಾಗಿ ಕಾಂಗ್ರೆಸ್ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಬ್ಲಾಕ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಸಂಸದೆ ರಮ್ಯಾ, ಲಹರಿ ಆಡಿಯೋ ಕಂಪನಿ ಮುಖ್ಯಸ್ಥ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ.
“ಲಹರಿ ವೇಲು ಅವರಿಗೆ ಬಿಜೆಪಿ ಟಿಕೆಟ್‌ ಬೇಕಾಗಿರಬಹುದು. ಅದಕ್ಕಾಗಿ ಪ್ರಯತ್ನಿಸುತ್ತಿರಬಹುದು. ಆ ಕಾರಣಕ್ಕೆ ಈ ರೀತಿ ಮಾಡ್ತಿರೋದು ಬೇಸರದ ಸಂಗತಿ” ಅಂತ ಟ್ಟಿಟರ್‌ನಲ್ಲಿ ರಮ್ಯಾ ಕಿಡಿ ಕಾಡಿದ್ದಾರೆ.
ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿದೆ ತಾಯಿಯ ಅಸಲಿ ಮುಖವಾಡ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − fourteen =
Remember me
