ಬೆಂಗಳೂರು:ಕರೊನಾ ಲಸಿಕೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಹೋಗಿ ವೈದ್ಯೆಯೊಬ್ಬರು ರೆಡ್ ಹ್ಯಾಂಡೆಡ್​ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನೂ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ (25) ಹಾಗೂ ಈಕೆಗೆ ಸಹಕರಿಸುತ್ತಿದ್ದ ಪ್ರೇಮಾ (34) ಬಂಧಿತರು.
ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪುಷ್ಪಿತಾ, ಪ್ರೇಮಾ ಏ. 23ರಿಂದ ಈ ದಂಧೆಯಲ್ಲಿ ತೊಡಗಿದ್ದು, ಕೊನೆಗೂ ಸಿಕ್ಕಿಬಿದ್ದಿದ್ದಾರೆ. ಪಿಎಚ್​ಸಿಗೆ ಬರುತ್ತಿದ್ದ ಲಸಿಕೆಯನ್ನು ಕದ್ದು ಪ್ರೇಮಾ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸುತ್ತಿದ್ದ ಪುಷ್ಪಿತಾ, ಬಳಿಕ ಅದನ್ನು ಒಂದಕ್ಕೆ 500 ರೂಪಾಯಿ ಪಡೆದು ಹಾಕಿಸುತ್ತಿದ್ದರು.
ಕರೊನಾ ಲಸಿಕೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಅನ್ನಪೂರ್ಣೇಶ್ವರಿನಗರ ಪೊಲೀಸರು ಲಸಿಕೆ ಪಡೆಯುವ ನೆಪದಲ್ಲಿ ಪ್ರೇಮಾ ಮನೆಗೆ ತೆರಳಿ ರೆಡ್​ ಹ್ಯಾಂಡೆಡ್​ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸ್​ ಇನ್​ಸ್ಪೆಕ್ಟರ್​ ಲೋಹಿತ್ ಲಸಿಕೆ ಪಡೆಯುವ ನೆಪದಲ್ಲಿ ತೆರಳಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳಿಂದ ಒಂದು ವ್ಯಾಕ್ಸಿನ್ ಕ್ಯಾರಿಯರ್, ಬಳಸಿದ ಹಾಗೂ ಬಳಸದ ಸಿರಿಂಜ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
