ಚಿತ್ರದುರ್ಗ:ಸ್ವಾಮೀಜಿ ಹಾಗೂ ಶಾಸಕರಿಗೆ ಕೊಲೆ ಬೆದರಿಕೆಯೊಡ್ಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವೈದ್ಯನಾಗಿದ್ದು, ಕೊನೆಗೂ ಈತ ಚಿತ್ರದುರ್ಗದ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
ದೊಡ್ಡಬಳ್ಳಾಪುರ ಮೂಲದ ಡಾ.ತಿಪ್ಪೇರುದ್ರಸ್ವಾಮಿ ಬಂಧಿತ ಆರೋಪಿ. ಎಂಬಿಬಿಎಸ್​, ಎಂಡಿ ಪದವೀಧರನಾಗಿರುವ ಈತ ವೈದ್ಯನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಚಿತ್ರದುರ್ಗಕ್ಕೆ ಕರೆದುಕೊಂಡು ಬಂದಿದ್ದಾರೆ.
ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತ್ರವಲ್ಲದೆ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೂ ಕೊಲೆ ಬೆದರಿಕೆಯೊಡ್ಡಲಾಗಿತ್ತು. ಕೆಎಸ್​​ಪಿ ಆ್ಯಪ್ ಮೂಲಕ ಆರೋಪಿಯು ಎಸ್​ಪಿ ಕಚೇರಿಗೆ ಸಂದೇಶ ಕಳಿಸಿದ್ದ. ಅಲ್ಲದೆ ಸ್ವಾಮೀಜಿ, ಶಾಸಕರಿಗೂ ಬೆದರಿಕೆ ಪತ್ರ ರವಾನಿಸಿದ್ದ.
ಬೆದರಿಕೆ ಹಿನ್ನೆಲೆಯಲ್ಲಿ ಭೋವಿ ಗುರುಪೀಠದ ಸಿಇಒ ಗೋವಿಂದಪ್ಪ ಅವರು ಸ್ವಾಮೀಜಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಕಾರ್ಯಪ್ರವೃತ್ತರಾಗಿದ್ದ ಚಿತ್ರದುರ್ಗ ಪೊಲೀಸರು ಎಸ್​ಪಿ ಕೆ.ಪರಶುರಾಮ್ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.
ಸ್ವಾಮೀಜಿಗೆ ಭದ್ರತೆ; ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಂದ ರಕ್ಷಣೆ..

ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nine =
Remember me
