ಸಿಂಧನೂರು:ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಕುಸಿದು ಬಿದ್ದು ಇಲ್ಲವೇ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿರುವಂಥ ಪ್ರಕರಣಗಳು ಇನ್ನೂ ಮುಂದುವರಿದಿದ್ದು, ಇಂದು ವೈದ್ಯರೊಬ್ಬರು ಕೂಡ ಅದೇ ರೀತಿಯ ಸಾವಿನಿಂದಾಗಿ ಕೊನೆಯುಸಿರೆಳೆದರು.
ರಾಯಚೂರು ಜಿಲ್ಲೆಯ ಸಿಂಧನೂರು ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ವೈದ್ಯ ಚಂದ್ರಶೇಖರ ಮಾದಿನೂರು (34) ಸಾವಿಗೀಡಾದವರು. ಇವರು ಇಂದು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಈ ಸಾವು ಸಂಭವಿಸಿದೆ.
ಇದನ್ನೂ ಓದಿ:ರಾತ್ರಿ ಸರಿಯಾಗಿ ನಿದ್ರೆ ಬರದಿದ್ದರೆ ಅದಕ್ಕೆ ಇವೇ ಕಾರಣಗಳಂತೆ!
ಎಂದಿನಂತೆ ಆಸ್ಪತ್ರೆಗೆ ಬಂದಿದ್ದ ಡಾ. ಚಂದ್ರಶೇಖರ, ಇಂದು ಬೆಳಗ್ಗೆ ರೋಗಿಗಳನ್ನು ಪರೀಕ್ಷೆ ಮಾಡಿ, ಸಲಹೆ-ಸೂಚನೆಗಳನ್ನು ನೀಡಿ ಚಿಕಿತ್ಸೆ ಒದಗಿಸಿದ್ದರು. ಆ ಬಳಿಕ ಅವರು ಆಸ್ಪತ್ರೆಯಲ್ಲಿ ಮಹಡಿಗೆ ಹತ್ತುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ.
ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರು ತಂದೆ, ಪತ್ನಿ, ಪುತ್ರರನ್ನು ಅಗಲಿದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ಇವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.
ನಿಮ್ಮಂಥ ನಾಯಕರಿರುವ ದೇಶದಲ್ಲಿ ನಾನು ಸುರಕ್ಷಿತ: ನಟಿ ರಶ್ಮಿಕಾ ಮಂದಣ್ಣ

ಮಾಮೂಲಿಗಿಂತ ಅರ್ಧಕ್ಕೂ ಅಧಿಕ ಕಡಿಮೆ ಖರ್ಚಲ್ಲಿ ಈಗ ಎಕ್ಸ್ ಸಬ್​ಸ್ಕ್ರಿಪ್ಷನ್ ಲಭ್ಯ; ಏನಿದು ಎಲಾನ್ ಮಸ್ಕ್ ಕಮರ್ಷಿಯಲ್ ಪ್ಲ್ಯಾನ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 4 =
Remember me
