ಬೆಂಗಳೂರು:ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಎನ್ನುವ ವ್ಯಕ್ತಿಯೊರ್ವ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂದು ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಇಂದು  ಏರುಪೇರು ಆಗಿತ್ತು. ಹಾಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.  ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಿದ ವೈದ್ಯರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪವಿತ್ರಾ ಗೌಡ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
‘ಪ್ರತಿದಿನ ಚೆಕಪ್​ಗೆ ಹೋಗುತ್ತೇವೆ. ಪವಿತ್ರಾ ಗೌಡ ಬೆಳಗ್ಗೆಯಿಂದ ಆಹಾರ ಸೇವಿಸಿಲ್ಲ. ಹಾಗಾಗಿ, ಗ್ಲೂಕೋಸ್​ ಲೆವೆಲ್​ ಕಡಿಮೆ ಇತ್ತು. ಐವಿ ಫ್ಯೂಯಿಡ್​ ಹಾಕಿದ್ದೇವೆ. ಸ್ವಲ್ಪ ಗ್ಯಾಸ್​ಟ್ರೈಟಿಸ್​ ಇತ್ತು. ಅದನ್ನು ಹೊರತು ಪಡಿಸಿದರೆ ಅವರು ಚೆನ್ನಾಗಿದ್ದಾರೆ. ಸ್ವಲ್ಪ ಲೋ ಬಿಪಿ ಆಗಿತ್ತು. ಎಲ್ಲ ಆರೋಪಿಗಳ ಆರೋಗ್ಯ ಚೆನ್ನಾಗಿದೆ. ಏನೂ ತೊಂದರೆ ಇಲ್ಲ’ ಎಂದು ವೈದ್ಯರು ಹೇಳಿದ್ದಾರೆ.
ಏನಿದು ಪ್ರಕರಣ?:ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದರ್ಶನ್​ ಫೋಟೋ ಹಿಡಿದು ಕಿಲೋ ಮೀಟರ್​ಗಟ್ಟಲೆ ಪಾದಯಾತ್ರೆ..ದೇವರ ಮೊರೆ ಹೋದ್ರು ಡಿ ಬಾಸ್​ ಫ್ಯಾನ್ಸ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
