ಬೆಂಗಳೂರು: ಭ್ರಷ್ಟಾಚಾರ ಹಾಗೂ ದುರ್ನಡತೆಯ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕೊಡಗು ಜಿಲ್ಲೆ ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮೂಳೆ ತಜ್ಞ ಡಾ. ಶ್ರೀನಿವಾಸ ಮೂರ್ತಿ ಅವರ ವಿರುದ್ಧ ವಿಚಾರಣೆ ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯ ಗೋವಿಂದಚಾರಿ ಎಂಬುವವರನ್ನು ಸೆ. 14ರಂದು ಮಧ್ಯಾಹ್ನ 3.50ರ ಸುಮಾರಿಗೆ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ವಿರಾಜಪೇಟೆಯ ಸಾರ್ವಜನಿಕ ಆಸ್ಪತರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಿಸದೆ ಅವರು ಮರಣ ಹೊಂದಿದ್ದು, ಶವದ ಮರಣೋತ್ತರ ಪರೀಕ್ಷೆ ನಡೆಸಲು ಕರ್ತವ್ಯನಿರತರಾಗಿದ್ದ ಡಾ. ಶ್ರೀನಿವಾಸ ಮೂರ್ತಿ ಹಣ ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ಕುರಿತು ಪರಿಶೀಲನೆಯಿಂದಾಗಿ ಆರೋಪ ಸಾಬೀತಾಗಿದ್ದು, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಶ್ರೀನಿವಾಸ ಮೂರ್ತಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಾರಸು ಮಾಡಿದ್ದರು. ಇವರ ಈ ನಡೆ ಸರ್ಕಾರಿ ವೈದ್ಯರಿಗೆ ತಕ್ಕದಲ್ಲದವಾದ್ದರಿಂದ ಇವರ ಭ್ರಷ್ಟಾಚಾರ ಹಾಗೂ ದುರ್ನಡತೆಯನ್ನು ಗಂಭೀರವಾಗಿ ಪರಿಗಣಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಅಮಾನತು ಅವಧಿಯಲ್ಲಿ ವೈದ್ಯರು ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿನ ಖಾಲಿ ಇರುವ ಕೀಲು ಮತ್ತು ಮೂಳೆ ತಜ್ಞರ ಹುದ್ದೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಆದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
