ಕೊಡಗು:ಚಿಕಿತ್ಸೆಗೆಂದು ದಾಖಲಾಗಿದ್ದ ವೈದ್ಯರೊಬ್ಬರು ತಡರಾತ್ರಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಮಡಿಕೇರಿಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಡಾ.ಕೆ.ಪೂಣಚ್ಚ ಸಾವಿಗೀಡಾದವರು. ಕಣ್ಣಿನ ಆಪರೇಷನ್​ಗೆಂದು ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ಇಂದು ಅವರಿಗೆ ಆಪರೇಷನ್ ಆಗಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ನಾಲ್ಕನೇ ಮಹಡಿಯಿಂದ ಬಿದ್ದು ದುರಂತ ಸಾವಿಗೆ ಒಳಗಾಗಿದ್ದಾರೆ.
ಇದನ್ನೂ ಓದಿ:ಆಕೆಗೆ ಡ್ರಾಪ್ ಕೊಡಲು ಹೊರಟಿದ್ದಕ್ಕೆ ಆತನನ್ನು ಹಿಡಿದು ಹೊಡೆದ್ರು!
ತಡರಾತ್ರಿ ಮೂರು ಗಂಟೆ ಸುಮಾರಿಗೆ ಶೌಚಕ್ಕೆಂದು ಹೋಗಿದ್ದ ಅವರು ಅಲ್ಲಿಂದ ದಾರಿ ತಪ್ಪಿ ನಾಲ್ಕನೇ ಮಹಡಿಯ ಟೆರೇಸ್​ಗೆ ಹೋಗಿದ್ದರು. ಟೆರೇಸ್ ಮೇಲಿನ ಪಾಚಿಯಿಂದಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 6 ಗಂಟೆಯವರೆಗೂ ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ಇರಲಿಲ್ಲ. ಬಳಿಕ ಪೂಣಚ್ಚ ಅವರ ಪತ್ನಿ ಬಂದು ಹುಡುಕತೊಡಗಿದಾಗ ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲಿನ ಸುರಕ್ಷತೆ ಕುರಿತು ಪೂಣಚ್ಚ ಕುಟುಂಬ ಅಸಮಾಧಾನ ವ್ಯಕ್ತಪಡಿಸಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − ten =
Remember me
