ಬೆಂಗಳೂರು:ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ ಮತ್ತು ಕರ್ನಾಟಕದಾದ್ಯಂತ ಆಗಸ್ಟ್ 17 ಶನಿವಾರ ಹೊರರೋಗಿ ಸೇವೆ ವಿಭಾಗ (ಓಪಿಡಿ) ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ:ಫಾಕ್ಸ್​ಕಾನ್ ಮುಖ್ಯಸ್ಥ ಯಂಗ್ ಲಿಯು ಭೇಟಿಯಾದ ರಾಹುಲ್ ಗಾಂಧಿ: ಭವಿಷ್ಯದ ತಂತ್ರಜ್ಞಾನ ಬೆಳವಣಿಗೆ ಕುರಿತು ಚರ್ಚೆ
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್​​​ಗಳು ಬೆಂಬಲ ಕೊಟ್ಟಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಒಪಿಡಿ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ.
ಈ ನಡುವೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು ವೈದ್ಯರ ಮುಷ್ಕರದ ಕಾರಣ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೊಲ್ಕತ್ತಾದ ಆರ್‌.ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯನ್ನು ಅಮಾನುಷವಾಗಿ ಅತ್ಯಾಚಾರ ನಡೆಸಿ ನಂತರ ಹತ್ಯೆ ಮಾಡಲಾಗಿದೆ. ಈ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ಮೂಲೆ, ಮೂಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣರಾದರನ್ನು ಶೀಘ್ರವೇ ಗಲ್ಲುಶಿಕ್ಷೆಗೆ ಗುರಿ ಮಾಡಲು ಆಗ್ರಹಿಸಲಾಗುತ್ತಿದೆ.
ಕೊಲ್ಕತ್ತಾ ವೈದ್ಯೆಯ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ದೇಶಾದ್ಯಂತ ಖಾಸಗಿ, ಸರ್ಕಾರಿ ಆಸ್ಪತ್ರೆಗಳನ್ನು ಬಂದ್‌ ಮಾಡಲಾಗುತ್ತಿದೆ. ಆದರೆ ಆಸ್ಪತ್ರೆಗಳ ಓಪಿಡಿ, ಶಸ್ತ್ರಚಿಕಿತ್ಸೆಯ ಸೇವೆಯೂ ಸ್ಥಗಿತವಾಗಲಿದೆ. ಐಎಂಎ ಅಧ್ಯಕ್ಷ ವಿನಯ್ ಅಗರವಾಲ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ನಮನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + sixteen =
Remember me
