ಬೆಂಗಳೂರು:ಮುಂಬರುವ ಲೋಕಸಭೆ ಚುಣಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್​ ಪಕ್ಷವು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಜನತೆಗೆ ಮತ್ತಷ್ಟು ಹತ್ತಿರವಾಗುವ ಬಗ್ಗೆ ಚಿಂತನೆ ನಡೆಸಿದೆ. ಅದಕ್ಕೆ ಪೂರವೆಂಬಂತೆ ನವಂಬರ್​ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಸಲಿದ್ದಾರೆ.
ಇನ್ನು ಜನತಾ ದರ್ಶನದಲ್ಲಿ ಭಾಗಿಯಾಗುವ ಜನರು ನಿಮ್ಮಗಳ ಜಯೆ ಈ ಅಗತ್ಯ ದಾಖಲೆಗಳನ್ನು ಕೊಂಡೊಯ್ಯುವುದು ಅತ್ಯಗತ್ಯ ಎಂದು ತಿಳಿದು ಬಂದಿದೆ. ಈ ಕುರಿತು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ.#PublicMeeting@CMofKarnataka@siddaramaiahpic.twitter.com/CTLOCJQdiy
ಇದನ್ನೂ ಓದಿ:ಕೋವಿಡ್​ನಂತೆಯೇ ಚೀನಾದಲ್ಲಿ ಭಯ ಹುಟ್ಟಿಸುತ್ತಿರುವ ನ್ಯುಮೋನಿಯಾ
ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಹಿತಿಯನ್ನು ಹಂಚಿಕೊಂಡಿದೆ.
ನವೆಂಬರ್​ 27ರಂದು ಸಿಎಂ ನಡೆಸಲಿರುವ ಜತನಾ ದರ್ಶನದಲ್ಲಿ ರಾಜ್ಯ ಸರ್ಕಾರದ ಸಚಿವರು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ. ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದು, ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
