ದೊಡ್ಡಬಳ್ಳಾಪುರ:ಅಮ್ಮನಿಗೆ ಹೆದರಿಸಲು ಹೋದ ಮಗಳು ದುರಂತ ಅಂತ್ಯಕಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಸಂಭವಿಸಿದೆ.
ರಾಜೀವ್ ಗಾಂಧಿ ನಗರದ ಸ್ನೇಹ (18) ಮೃತ ದುರ್ದೈವಿ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಗೆಳೆಯರೊಟ್ಟಿಗೆ ಫೋನ್​ನಲ್ಲೇ ಮಾತನಾಡುತ್ತ ಹೆಚ್ಚು ಕಾಲ ಕಳೆಯುತ್ತಿದ್ದ ಸ್ನೇಹಾಗೆ ಆಕೆಯ ತಾಯಿ ಬೈದು ಬುದ್ಧಿ ಮಾತು ಹೇಳಿದ್ದರಂತೆ.ಅಮ್ಮ ಬೈದಿದ್ದಕ್ಕೆ ನೊಂದುಕೊಂಡ ಸ್ನೇಹಾ, ಮಾ.3ರಂದು ಇಲಿಪಾಷಾಣ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.‌ ಅಮ್ಮನನ್ನು ಹೆದರಿಸಲೆಂದು ಆತ್ಮಹತ್ಯೆ ಯತ್ನ ಮಾಡಿದ್ದಂತೆ. ಆದರೆ ನಿಜವಾಗಿಯೂ ವಿಷದ ಪರಿಣಾಮ ಪ್ರಾಣಕ್ಕೆ ಕುತ್ತು ತಂದಿದೆ. ಮಗಳನ್ನು ಬದುಕಿಸಿಕೊಳ್ಳಲು ಪಾಲಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು.ಇದನ್ನೂ ಓದಿರಿತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
17 ದಿನ ಜೀವನ್ಮರಣ ಹೋರಾಟ ನಡೆಸಿದ ಸ್ನೇಹಾ, ಚಿಕಿತ್ಸೆ ಫಲಿಸದೆ ಮಾ.19ರಂದು ಕೊನೆಯುಸಿರೆಳೆದಳು. ಅಯ್ಯೋ ಮಗಳೇ ನಾನು ನಿನಗೆ ಬುದ್ಧಿಮಾತು ಹೇಳಿದ್ದೇ ತಪ್ಪಾಯ್ತಾ? ಯಾಕವ್ವ ದುಡುಕಿಬಿಟ್ಟೆ ಎಂದು ಮೃತಳ ಪಾಲಕರು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 1 =
Remember me
