ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಲವು ತಿಂಗಳುಗಳಿಂದ ಬಾಕಿ ಇರುವ ದಂಡವನ್ನು ವಸೂಲಿ ಮಾಡುವ ನಿಟ್ಟಿನಲ್ಲಿ ಘೋಷಿಸಿದ 50% ಆಫರ್ ಭಾರಿ ಸಂಚಲನವನ್ನೇ ಸೃಷ್ಟಿಸಿತ್ತು. ಮಾತ್ರವಲ್ಲ, ಅದು ವರ್ಕೌಟ್​ ಆಗಿ ನಿರೀಕ್ಷೆಗೂ ಮೀರಿ ದಂಡ ಸಂಗ್ರಹವಾಗಿದ್ದಲ್ಲದೆ, ಫೆ. 11ರ ವರೆಗಿದ್ದ ಅವಧಿಯನ್ನು ವಿಸ್ತರಿಸಬೇಕು ಎಂಬ ಬೇಡಿಕೆಯೂ ಕೇಳಿಬಂದಿತ್ತು.
ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ.ವೀರಪ್ಪ ಅವರ ನೇತೃತ್ವದಲ್ಲಿ ನಡೆದ ಲೋಕ ಅದಾಲತ್ ಸಂದರ್ಭ ಅವರು ಇಂಥದ್ದೊಂದು ಶೇ. 50 ವಿನಾಯಿತಿ ವಿಚಾರವನ್ನು ಪ್ರಸ್ತಾಪಿಸಿ ಸಲಹೆ ನೀಡಿದ್ದರಿಂದ ಈ ಆಫರ್ ಜಾರಿಗೆ ಬಂದಿತ್ತು. ಫೆ. 3ರಿಂದ ಫೆ. 11ರ ವರೆಗೆ ಈ ವಿನಾಯಿತಿ ಜಾರಿಯಲ್ಲಿದ್ದು ಒಟ್ಟು 121 ಕೋಟಿಗೂ ಅಧಿಕ ದಂಡ ಸಂಗ್ರಹವಾಗಿತ್ತು.
ಈಗ ಈ 50% ವಿನಾಯಿತಿ ಸಂಬಂಧ ನ್ಯಾ.ವೀರಪ್ಪ ಅವರು ಪ್ರತಿಕ್ರಿಯಿಸಿದ್ದು, ಅದನ್ನು ಮತ್ತೆ ಜಾರಿಗೊಳಿಸುವ ಮನವಿ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ವಿನಾಯಿತಿ ಮೇರೆ ದಂಡ ಸಂಗ್ರಹಕ್ಕೆ ಸಂಚಾರ ವಿಭಾಗದ ವಿಶೇಷ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ. ಇನ್ನೆರಡು ವಾರಗಳ ಕಾಲ ವಿನಾಯಿತಿ ಅವಕಾಶ ನೀಡುವಂತೆ ಕೋರಿದ್ದಾರೆ. ಫೆ. 14ರಿಂದ ಫೆ.28ರವರೆಗೆ ಮುಂದುವರಿಸುವ ಚಿಂತನೆ ಇದೆ ಎಂದಿರುವ ನ್ಯಾ.ವೀರಪ್ಪ, ಈ ಬಗ್ಗೆ ನಾಳೆ ನಿರ್ಧಾರ ಹೊರಬೀಳಲಿದೆ ಎಂದಿದ್ದಾರೆ. ಯಾವುದಕ್ಕೂ ನಾಳೆ ಹೊರಹೊಮ್ಮುವ ಅಧಿಕೃತ ಆದೇಶದ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ.
ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​

ಕಾಲೇಜು ವಿದ್ಯಾರ್ಥಿಗಳೇ.. ವೀರ್ಯಾಣು ದಾನ ಮಾಡಿ: ಸ್ಪರ್ಮ್ ಬ್ಯಾಂಕ್​ಗಳಿಂದ ಹೀಗೊಂದು ಮನವಿ; ಎಲ್ಲಿ, ಏಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + thirteen =
Remember me
