ಬೆಂಗಳೂರು:ರಾಜ್ಯದಲ್ಲಿ ಕರೊನಾ ಹಾವಳಿ ನಡುವೆಯೇ ರಾಜಕೀಯ ವಿಚಾರವೂ ಗರಿಗೆದರಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತುಂಬಾ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದಕ್ಕೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ.
ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಎರಡೂ ಊಹಾಪೋಹ ಎಂಬ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲ, ಆ ಥರದ ಯಾವುದೇ ವಿಚಾರಗಳು ನಮ್ಮ ಕಣ್ಮುಂದೆ ಇಲ್ಲ. ಕೇಂದ್ರ ಸರ್ಕಾರ ಕೂಡ ಆ ಬಗ್ಗೆ ಯಾವುದೇ ಸೂಚನೆ ಕೊಟ್ಟಿಲ್ಲ. ಮುಂದೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಂತೆ ನಡೆದುಕೊಳ್ಳುತ್ತೇವೆ ಎನ್ನುವ ಮೂಲಕ ಅವರು ಸದ್ಯಕ್ಕೆ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸ್ಷಷ್ಟಪಡಿಸಿದ್ದಾರೆ.
ಸಿನಿಮೀಯ ರೀತಿಯಲ್ಲಿ ಗೋರಕ್ಷಣೆ; 1 ಕಿ.ಮೀ. ದೂರ ಕಾರಲ್ಲಿ ರಿವರ್ಸ್ ಹೋಗಿ ಪರಾರಿಯಾದ ದನಗಳ್ಳರು!

ಫಸ್ಟ್ ಡೋಸ್​ ಲಸಿಕೆ ತೆಗೆದುಕೊಳ್ಳುತ್ತಿದ್ದಂತೆ ಫಸ್ಟ್​ ಹೀಗೇನಾದ್ರೂ ಮಾಡ್ಬಿಟ್ಟೀರಾ ಜೋಕೆ..!!!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + twelve =
Remember me
