ಶಿರಸಿ:ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಅವರು ರಾಜಕೀಯ ನಿವೃತ್ತಿ ಪಡೆಯುವ ಲಕ್ಷಣಗಳು ನಿಚ್ಚಳವಾಗಿದೆ. ಅವರ ರಾಜಕೀಯ ನಿವೃತ್ತಿಯ ಚಿಂತನೆಗೆ ಮುಖ್ಯ ಕಾರಣ ಏನೆಂಬುದು ಕೂಡ ಈಗ ಬಹಿರಂಗಗೊಂಡಿದೆ.
ಅನಂತಕುಮಾರ ಹೆಗಡೆ ಅವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಅವರ ಆಪ್ತ ಸಹಾಯಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಅನಂತಕುಮಾರ್ ಹೆಗಡೆ ಅವರು ತೀವ್ರವಾದ ಬೆನ್ನು ನೋವು ಹಾಗೂ ಕಾಲುನೋವಿನ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ರಾಜಕೀಯವಾಗಿ ನಿವೃತ್ತಿ ಹೊಂದುವುದರ ಕುರಿತು ನಿರ್ಣಯಿಸಿದ್ದನ್ನು ಹೇಳಿಕೊಂಡಿದ್ದರು ಎಂಬುದನ್ನು ಉಲ್ಲೇಖಿಸಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಯಿಂದಾಗಿ ಅವರು ವಿಶ್ರಾಂತಿಯಲ್ಲಿದ್ದು, ರಾಜಕೀಯ ನಿವೃತ್ತಿ ಹೊಂದಲಿದ್ದಾರೆಯೇ ಎಂಬ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.
ಕೆಲವು ತಿಂಗಳಿಂದ ಹೆಗಡೆಯವರ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವುದರಿಂದ ತಜ್ಞರು ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆ ನಡೆಸುವ ಅಗತ್ಯದ ಬಗ್ಗೆ ತಿಳಿಸಿದ್ದರು. ಹೀಗಾಗಿ ಕೆಲವು ದಿನಗಳ ಹಿಂದೆ ನಡೆದ ಮೇಜರ್ ಆಪರೇಷನ್​ ಬಳಿಕ ಸಂಸದರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ತೀವ್ರ ಅನಾರೋಗ್ಯದ ಕಾರಣದಿಂದಾಗಿ ಅವರಿಗೆ ಸಾರ್ವಜನಿಕರನ್ನು ಭೇಟಿ ಮಾಡುವುದಕ್ಕೂ ಸಾಧ್ಯವಾಗುತ್ತಿಲ್ಲ. ಅಲ್ಲದೆ ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಸಂಸದರು ಸಂಪೂರ್ಣ ಗುಣಮುಖರಾಗುವವರೆಗೆ ಅವರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂಬುದಾಗಿ ಅವರ ಆಪ್ತ ಸಹಾಯಕರು ತಿಳಿಸಿದ್ದು, ಅದೇ ಪತ್ರದಲ್ಲಿ ರಾಜಕೀಯ ನಿವೃತ್ತಿ ಚಿಂತನೆ ಕುರಿತೂ ಪ್ರಸ್ತಾಪಿಸಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಕೆಲಸಕ್ಕೆ ಹೋಗಿದ್ದ ಹೆಂಡತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ!; ಪತ್ನಿಯ ಶೀಲದ ಕುರಿತು ಅನುಮಾನ?

10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 2 =
Remember me
