ಬೆಂಗಳೂರು:ಕಾಂತರಾಜು ಆಯೋಗ ತಯಾರಿಸಿರುವ ಜಾತಿಗಣತಿ ವರದಿಯನ್ನು ಯಾವುದೇ ಕಾರಣಕ್ಕೂ ಮಂಡಿಸಬಾರದು. ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನ, ಆಧಾರ್ ಬಳಸಿಕೊಂಡು ಹೊಸ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ವೀರಶೈವ-ಲಿಂಗಾಯತ ಸಮುದಾಯ ನಿರ್ಣಯ ತೆಗೆದುಕೊಂಡಿದೆ.
ಅಖಿಲ ಭಾರತ ವೀರಶೈವ ಮಹಾಸಭಾ ಗುರುವಾರ ರಮಣಮಹರ್ಷಿ ರಸ್ತೆಯಲ್ಲಿರುವ ‘ವೀರಶೈವ- ಲಿಂಗಾಯತ ಭವನ’ದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜಾತಿ ಗಣತಿ ವರದಿ ಹಾಗೂ ಸರ್ಕಾರ ವರದಿ ಸ್ವೀಕರಿಸಿದರೆ ಮುಂದೆ ತೆಗೆದುಕೊಳ್ಳಬೇಕಾದ ತೀರ್ವನಗಳ ಕುರಿತು ಪದಾಧಿಕಾರಿಗಳು ರ್ಚಚಿಸಿದರು. ಸಭಾದ ಅಧ್ಯಕ್ಷ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಪ್ರಧಾನ ಕಾರ್ಯದರ್ಶಿ ಮತ್ತು ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಭೆಯಲ್ಲಿ ಜಾತಿ ಗಣತಿ ವರದಿ ಸಂಬಂಧಪಟ್ಟಂತೆ ಇತ್ತೀಚಿನ ದಿನಗಳಲ್ಲಿ ನಡೆದ ವಿದ್ಯಮಾನಗಳ ಕುರಿತು ಅವಲೋಕಿಸಲಾಯಿತು.
2015ರಲ್ಲಿ ಅವೈಜ್ಞಾನಿಕವಾಗಿ ತಯಾರಿಸಿರುವ ಜಾತಿಗಣತಿ ವರದಿಯನ್ನು ಅಂಗೀಕರಿಸುವುದಾಗಿ ಸಿಎಂ ಸಿದ್ದರಾಮಯ್ಯ ಪದೇಪದೆ ಹೇಳುತ್ತಿದ್ದಾರೆ. ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಹ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಈ ವರದಿ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕಾರ ಆಗಬಾರದು. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಕಾಂಗ್ರೆಸ್ಸಿನ ಮುಂಚೂಣಿ ನಾಯಕರ ಅಗ್ರಗಣ್ಯರ ಪೈಕಿ ಇಬ್ಬರು ಇದ್ದೀರಾ. ಹೀಗಾಗಿ, ವರದಿ ಸ್ವೀಕಾರ ಮಾಡದಂತೆ ಸರ್ಕಾರದ ಮೇಲೆ ಬಲವಾಗಿ ಒತ್ತಡ ಹೇರಬೇಕು ಎಂದು ಶಾಮನೂರು ಶಿವಶಂಕರಪ್ಪ ಹಾಗೂ ಈಶ್ವರ ಖಂಡ್ರೆಗೆ ಸಭೆಯಲ್ಲಿದ್ದವರು ಸಲಹೆ ನೀಡಿದರು.
ಜಾತಿಗಣತಿ ವರದಿ ತಯಾರಿಸಿ 8 ವರ್ಷ ಕಳೆದಿದೆ. 10 ವರ್ಷಕ್ಕೊಮ್ಮೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕೆಂಬ ನಿಯಮವಿದೆ. ಹೀಗಾಗಿ, ಈ ವರದಿಯು ಅಪ್ರಸ್ತುತವಾಗಿದೆ. 8 ವರ್ಷದಲ್ಲಿ ಸಮಾಜದಲ್ಲಿ ಹಲವು ಬದಲಾವಣೆಗಳಾಗಿವೆ. ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿಯ ನೈಜ ಸ್ಥಿತಿಗತಿಯನ್ನು ವರದಿ ಬಿಂಬಿಸುವುದಿಲ್ಲ. ನಿಖರ ದತ್ತಾಂಶ ಪಡೆದು ಹೊಸ ಜಾತಿಗಣತಿ ವರದಿ ತಯಾರಿಸುವುದು ಸೂಕ್ತ ಎಂದು ಸಭೆಯಲ್ಲಿದ್ದವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ವರದಿಯಲ್ಲಿವೆ ಹಲವು ಲೋಪ?:2015ರಲ್ಲಿ ಸಿದ್ಧಪಡಿಸಿರುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿಯ ಅಂಕಿ-ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ, ಮತ್ತೊಮ್ಮೆ ವೈಜ್ಞಾನಿಕವಾಗಿ ಹಾಗೂ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಯಾವುದೇ ಶಂಕೆಗೆ ಅಸ್ಪದವಿಲ್ಲದಂತೆ ಜಾತಿಗಣತಿ ಕಾರ್ಯ ನಡೆಸುವುದು ಸೂಕ್ತ ಎಂದು ಶಾಮನೂರು ಶಿವಶಂಕರಪ್ಪ, ಸರ್ಕಾರವನ್ನು ಒತ್ತಾಯಿಸಿದರು.
ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವು ಮನೆಗಳಿಗೆ ಭೇಟಿ ಮಾಡದೆ ವರದಿ ಸಿದ್ಧಪಡಿಸಿರುವ ಬಗ್ಗೆ ದೂರುಗಳಿವೆ. ಈ ಸಮೀಕ್ಷೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆ ಕಡಿಮೆ ಇದೆ ಎಂದು ತೋರಿಸಿರುವ ಬಗ್ಗೆ ಮಾಹಿತಿ ಇದೆ. ಇದರಿಂದಾಗಿ ಸಮಾಜಕ್ಕೆ ತೀವ್ರ ಸ್ವರೂಪದಲ್ಲಿ ನಷ್ಟವಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. ‘ಸಕಲ ಜಾತಿ ಜನಾಂಗಗಳಿಗೆ ಲೇಸನ್ನೇ ಬಯಸುವ ಸಮಾಜ ನಮ್ಮದು’. ‘ಎಲ್ಲರ ಒಳಿತನ್ನು ಬಯಸುವುದು ಸಮುದಾಯದ ಗುರಿ’. ನಾವು ಜಾತಿಗಣತಿಯ ವಿರೋಧಿಗಳಲ್ಲ. ಆದರೆ, ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಸೆ. ಇದು 8 ವರ್ಷದ ಹಳೆಯದಾಗಿದ್ದು, ನ್ಯೂನತೆಗಳಿಂದ ಕೂಡಿರುವ ಕಾರಣ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು. ಇದರ ಬಗ್ಗೆ ಸರ್ಕಾರ ಮತ್ತೊಮ್ಮೆ ವಿವೇಚನಾಯುಕ್ತವಾಗಿ ಪರಾಮಶಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಿಂದಿನಿಂದಲೂ ವಿರೋಧ:ರಾಜ್ಯದ ಪ್ರಬಲ ಸಮುದಾಯಗಳಲ್ಲಿ ಒಂದಾದ ವೀರಶೈವ ಲಿಂಗಾಯುತ ಸಮುದಾಯವು ಅವೈಜ್ಞಾನಿಕವಾಗಿ ರಚಿಸಲಾಗಿರುವ ಜಾತಿ ಗಣತಿ ವರದಿಗೆ ಹಿಂದಿನಿಂದಲೂ ವಿರೋಧಿಸುತ್ತಿದೆ. ಈಶ್ವರ ಖಂಡ್ರೆ ನೇತೃತ್ವದಲ್ಲಿ ಈಚೆಗೆ ನಡೆದಿದ್ದ ಪೂರ್ವಭಾವಿ ಸಭೆಯಲ್ಲೂ ಹೊಸ ಸಮೀಕ್ಷೆಗೆ ಒತ್ತಾಯಿಸುವ ಕುರಿತು ಮಹಾಸಭಾ ರ್ಚಚಿಸಿತ್ತು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಆಧಾರ್ ಆಧಾರಿತ ಹೊಸ ಸಮೀಕ್ಷೆ ನಡೆಸಬಹುದು ಎನ್ನುವ ಸಲಹೆಯನ್ನು ಸರ್ಕಾರಕ್ಕೆ ನೀಡಲು ಮಹಾಸಭಾ ನಿರ್ಧರಿಸಲಾಗಿತ್ತು. ಈಗ ಮತ್ತೆ ಪ್ರಮುಖ ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ವರದಿ ಮಂಡಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುವ ತೀರ್ವನಿಸಿದೆ.
ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ಶಾಸಕರು, ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಸೇರಿ ಮಹಸಭಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾತಿಗಣತಿ ವರದಿ ಬಗ್ಗೆ ಸಭೆಯಲ್ಲಿ ವಿಸõತವಾಗಿ ರ್ಚಚಿಸಲಾಗಿದೆ. ತಯಾರಿಕೆಯಲ್ಲಿ ಕೆಲ ಲೋಪ ಇದೆ. ವಿಧಾನಸಭಾ ಅಧಿವೇಶನದಲ್ಲಿ ವರದಿ ಮಂಡಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಭೆಯಲ್ಲಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಸಂಬಂಧ ಈಗಾಗಲೇ ಸಿಎಂ ಜತೆ ರ್ಚಚಿಸಲಾಗಿದೆ. ಈಗ ಮತ್ತೊಮ್ಮೆ ಸಿಎಂ ಜತೆ ರ್ಚಚಿಸಲಾಗುವುದು.
| ಈಶ್ವರ ಖಂಡ್ರೆ, ಅರಣ್ಯ ಸಚಿವ
ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 13 =
Remember me
