ಬೆಂಗಳೂರು:ರಾಜ್ಯಾದ್ಯಂತ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಡೆಂಘೆ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ತೆಗೆದುಕೊಳ್ಳಬೇಕು ಹೊರತು ಭಯ ಪಡುವ ಅಗತ್ಯವಿಲ್ಲ ಎಂದು ಅವಧೂತ ಶ್ರೀ ವಿನಯ್​ ಗುರೂಜಿ ಹೇಳಿದ್ದಾರೆ.
ಮಹಾತ್ಮಾ ಗಾಂಧಿ ಸೇವಾ ಟ್ರಸ್ಟ್​ ಉತ್ತರಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಪರಿಸರ ಸ್ವಚ್ಛತಾ ಅಭಿಯಾನ,ಸೊಳ್ಳೆಗಳ ಔಷಧ ಸಿಂಪಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಪ್ರಸ್ತುತ ಮಳೆಗಾಲ ಇರುವ ಹಿನ್ನೆಯಲ್ಲಿ ಡೆಂಘೆ ಕೇಸ್​ಗಳು ಸಹಜವಾಗಿ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ನಗರಗಳಲ್ಲಿನ ಸ್ವಚ್ಛತೆಗೆ ಜನರು ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮತ್ತು ಮೇಲ್ಛಾವಣಿ ತೊಟ್ಟಿಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗಗಳಿಂದ ದೂರ ಇರಬಹುದು. ಡೆಂಘೆ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಬಿಬಿಎಂಪಿ ಕಾರ್ಯವನ್ನು ಶ್ಲಾಘಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟುಉತ್ತರಹಳ್ಳಿ ಸುತ್ತಮುತ್ತ ಸೊಳ್ಳೆಗಳ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ಸ್ವಚ್ಛತೆ ನಡೆಸಿದ ಶ್ರೀ ವಿನಯ್​ ಗುರೂಜಿ, ಪಾಲಿಕೆ ವೈದ್ಯಾಧಿಕಾರಿಗಳ ಸಹಯೋಗದೊಂದಿಗೆ ಡೆಂಘೆ ಬಗ್ಗೆ ಜಾಗೃತಿ ಮೂಡಿಸಿದರು. ಇದೇ ವೇಳೆ ಪಾಲಿಕೆಯ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಶಾಸಕ ಎಂ. ಕೃಷ್ಣಪ್ಪ, ಟ್ರಸ್ಟ್​ ಇದರ ಮಣಿ ಹೆಗ್ಡೆ ಸೇರಿದಂತೆ ನೂರಾರು ಅವಧೂತ ಅನುಯಾಯಿಗಳು ಉಪಸ್ಥಿತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
