ಬೆಂಗಳೂರು:ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣ ತಾಲ್ಲೂಕು ಗಣಂಗೂರು 2ನೇ ಟೋಲ್​ನಲ್ಲಿ ಶುಲ್ಕ ಸಂಗ್ರಹಿಸುವುದನ್ನು ಮತ್ತು ಸರ್ವಿಸ್ ರಸ್ತೆ ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಮನವಿ ಮಾಡಿಕೊಳ್ಳಲಾಗಿದೆ.
ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಜೊತೆಯಾಗಿ ಲೋಕೋಪಯೋಗಿ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಈ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯು ಮಾರ್ಚ್ ತಿಂಗಳಲ್ಲಿ ಲೋಕಾರ್ಪಣೆಗೊಂಡಿದೆ. ಇದರಿಂದ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಶೀಘ್ರ ಸಂಚಾರಕ್ಕೆ ಅನುಕೂಲವಾಗಿದೆ ಎಂಬ ಅಂಶ ಬಿಟ್ಟರೆ ಇದು ಜನರಿಗೆ ನಿಜಕ್ಕೂ ಜೇಬು ಸುಡುವ ರಹದಾರಿಯಾಗಿದೆ. ಈ ಮಾರ್ಗದಲ್ಲಿ ಜನರು ಟೋಲ್ ಕಟ್ಟಿ ಕಟ್ಟಿ ಬಸವಳಿಯುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈಗ ಇದ್ದದ್ದು ಸಾಲದೆಂಬಂತೆ ಶ್ರೀರಂಗಪಟ್ಟಣ ತಾಲೂಕು ಗಣಂಗೂರು 2ನೇ ಟೋಲ್‌ನಲ್ಲಿ ಸಹ ಇದೇ ಜುಲೈ 1ರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಲಿರುವುದು ಜನರಿಗೆ ನುಂಗಲಾರದ ತುತ್ತಾಗಿದೆ.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಈ ರೀತಿಯಲ್ಲಿ ಜನರಿಗೆ ಹೊರೆಯಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಅಲ್ಲದೆ, ಬೆಂಗಳೂರಿನಿಂದ ಮೈಸೂರಿಗೆ ಸ್ವಂತ ವಾಹನದಲ್ಲಿ ಹೋಗಿ ಬರಲು ಟೋಲ್ ಶುಲ್ಕವಾಗಿಯೇ 500 ರೂಪಾಯಿ ಕಟ್ಟಬೇಕೆಂದರೆ ನಿಜಕ್ಕೂ ಪ್ರಯಾಣ ಎಂಬುದು ದುಸ್ತರವಾಗಲಿದೆ ಎಂದು ಇವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ಒಂದೆಡೆ ಆರಂಭಿಕ ಹಂತದಲ್ಲಿ ಟೋಲ್ ಶುಲ್ಕ ಬೀಳುತ್ತಿದೆ. ಇದನ್ನು ಜೂನ್ 1ರಿಂದಲೇ ಜಾರಿಗೆ ಬರುವಂತೆ ಶೇ.22ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿತ್ತು. ಮೊದಲೇ ಬೆಲೆ ಏರಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಇದೇ ಹೊರೆ ಅಂದುಕೊಳ್ಳುತ್ತಿರಬೇಕಾದರೆ ಈಗ ಶ್ರೀರಂಗಪಟ್ಟಣದಲ್ಲೂ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಕಾಡುತ್ತಿದೆ ಎಂದಿದ್ದಾರೆ.
ಇಲ್ಲಿ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆಗಬೇಕಿರುವ ಕಾಮಗಾರಿಗಳು ಹತ್ತಾರು ಇವೆ. ಅವುಗಳು ಇನ್ನೂ ಕುಂಟುತ್ತ ಸಾಗಿವೆ. ಕೇಳಿದರೆ ಕುಂಟು ನೆಪಗಳನ್ನು ಹೇಳಲಾಗುತ್ತದೆ. ಆದರೆ, ಜನರಿಂದ ದುಡ್ಡು ಪಡೆಯಲು ಮಾತ್ರ ಇದಾವುದೂ ಲೆಕ್ಕಕ್ಕೇ ಬಾರದು ಎಂದರೆ ಹೇಗೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ತಹಶೀಲ್ದಾರ್​ ಮನೇಲಿ ಸಿಕ್ತು ಲೀಟರ್​​ಗಟ್ಟಲೆ ಮದ್ಯ!; ಲೋಕಾಯುಕ್ತ ದಾಳಿ ವೇಳೆ ಪತ್ತೆ

ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ತಯಾರಿ: ವಿವರಣೆ ಕೇಳಿ ಪೊಲೀಸರಿಂದ ನೋಟಿಸ್ ಜಾರಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:sixteen + 6 =
Remember me
