ಬೆಂಗಳೂರು :ಕ್ರಿಮಿನಲ್ ಪ್ರಕರಣಗಳಲ್ಲಿ ಯಾವುದೇ ತನಿಖಾಧಿಕಾರಿಯು ಪೋಸ್ಟ್ ಮಾರ್ಟೆಮ್ ನಡೆಯುವ ಸ್ಥಳಕ್ಕೆ ಹೋಗುವುದಿಲ್ಲ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಗಳಿಗೂ ಘಟನಾ ಸ್ಥಳದ ಪಂಚನಾಮೆ ಅಥವಾ ಮಹಜರು ವರದಿಯ ಬಗ್ಗೆ ನಾಲ್ಕು ವಾಕ್ಯಗಳನ್ನು ಸರಿಯಾಗಿ ಬರೆಯಲು ತಿಳಿದಿಲ್ಲ. ಕಾನೂನು ಬಗ್ಗೆ ಆಳವಾದ ಮಾಹಿತಿ ಇರದ ಪೊಲೀಸ್ ಮುಖ್ಯಪೇದೆ ತನಿಖೆ ನಡೆಸಿ ವರದಿ ಸಿದ್ಧಪಡಿಸಿದರೆ, ಅದಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಅಥವಾ ಸಬ್ ಇನ್‌ಸ್ಪೆಕ್ಟರ್ ಸಹಿ ಮಾಡಿ ಕೋರ್ಟ್‌ಗೆ ಸಲ್ಲಿಸುತ್ತಾರೆ… ಪೊಲೀಸ್ ತನಿಖಾ ವೈಖರಿಯ ಕುರಿತು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಪರಿಯಿದು.
ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆ ವೇಳೆ, ಪೊಲೀಸ್ ತನಿಖಾ ವರದಿಯ ಲೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರು. ಸರ್ಕಾರಿ ವಕೀಲರು, ನ್ಯಾಯಾಧೀಶರು ಹಾಗೂ ಕಾನೂನು ತಜ್ಞರು ಆಗಾಗ ಕಾರ್ಯಕ್ರಮಗಳನ್ನು ನಡೆಸಿ ಪೊಲೀಸ್ ಸಿಬ್ಬಂದಿಗೆ ಕಾನೂನಿನ ಅರಿವು ಮೂಡಿಸಬೇಕು. ಜತೆಗೆ ನ್ಯಾಯಾಲಯಗಳ ತೀರ್ಪುಗಳ ಕುರಿತು ಮಾಹಿತಿ ನೀಡಬೇಕು. ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ಸಮರ್ಪಕವಾಗಿ ತಿಳಿಸಿಕೊಡಬೇಕಾದದ್ದು ಅಗತ್ಯ ಎಂದು ಹೇಳಿದರು.
ಸರ್ಕಾರಿ ಅಭಿಯೋಜಕರನ್ನು ಉದ್ದೇಶಿಸಿ, ಅಭಿಯೋಜಕರೇ ಪೊಲೀಸರು ಸಮರ್ಪಕವಾದ ತನಿಖೆ ನಡೆಸುತ್ತಿಲ್ಲ. ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ಪಾಲಿಸುತ್ತಿಲ್ಲ. ಅವರ ಈ ಪರಿಸ್ಥಿತಿಗೆ ಮುಖ್ಯ ಕಾರಣವೆಂದರೆ, ಪ್ರತಿ ದಿನ ವಿಐಪಿಯೊಬ್ಬರು ನಗರಕ್ಕೆ ಭೇಟಿ ನೀಡುತ್ತಾರೆ. ಇವರುಗಳನ್ನು ಅವರ ಸುಗಮ ಸಂಚಾರ ವ್ಯವಸ್ಥೆ ಹಾಗೂ ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತದೆ. ಬೆಳಗ್ಗೆ ಎದ್ದರೆ ಪೊಲಿಸರು ಬಂದೋಬಸ್ತ್ ಕೆಲಸದಲ್ಲಿ ತೊಡಗುತ್ತಾರೆ. ಇನ್ನು ಯಾವಾಗ ತನಿಖೆ ನಡೆಸುತ್ತಾರೆ? ಎಂದು ಸದ್ಯದ ಪರಿಸ್ಥಿತಿ ಕುರಿತು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.
ಇನ್ನೂ ಯಾವೊಬ್ಬರ ತನಿಖಾಧಿಕಾರಿ ಪೋಸ್ಟ್‌ಮಾರ್ಟಮ್ ನಡೆಯುವ ವೇಳೆ ಹಾಜರಿರುವುದಿಲ್ಲ. ವಾಸನೆ ಬರುತ್ತಿರುತ್ತದೆ ಎಂಬ ಕಾರಣಕ್ಕೆ ಹೋಗುವುದಿಲ್ಲ. ಅಪರೂಪಕ್ಕೆ ಮಹತ್ವದ ಪ್ರಕರಣದಲ್ಲಿ ಹೋದರೂ ವೈದ್ಯರ ಜತೆ ಮಾತನಾಡುತ್ತ ಕೂರುತ್ತಾರಷ್ಟೇ. ಪಂಚನಾಮೆ ಹಾಗೂ ಮಹಜರು ಸರಿಯಾಗಿ ಮಾಡುವುದಿಲ್ಲ ಎನ್ನುವ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಬಂದೋಬಸ್ತ್ ಕೆಲಸದಲ್ಲಿದ್ದರೆ, ಹೆಡ್ ಕಾನ್‌ಸ್ಟೇಬಲ್ ತನಿಖೆ ನಡೆಸಿ, ವರದಿ ಸಿದ್ದಪಡಿಸುತ್ತಾರೆ. ಆ ವರದಿಗೆ ಮೇಲಧಿಕಾರಿಗಳು ಸಹಿ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಹೆಡ್‌ಕಾನ್‌ಸ್ಟೇಬಲ್‌ಗೆ ಕಾನೂನು ಬಗ್ಗೆ ಏನು ಗೊತ್ತಿರುತ್ತದೆ? ಕೋರ್ಟ್ ತೀರ್ಪುಗಳ ಬಗ್ಗೆ ಮಾಹಿತಿ ಏನಿರುತ್ತದೆ? ಕಾನೂನು ತಿಳಿಯದಿದ್ದರೆ ಯಾವ ರೀತಿ ತನಿಖೆ ನಡೆಸಿರುತ್ತಾರೆ ಎಂದು ನೀವೇ ಕಲ್ಪನೆ ಮಾಡಿಕೊಳ್ಳಿ ಎಂದು ನ್ಯಾಯಮೂರ್ತಿಗಳು ಹೇಳಿದರು.
ತನಿಖಾಧಿಕಾರಿಗೆ ಕಾನೂನು ಜ್ಞಾನವಿರಬೇಕುಆರೋಪಿ ಘಟನೆ ಸ್ಥಳಕ್ಕೆ ಹೇಗೆ ಬಂದ. ಮರಳಿ ಹೇಗೆ ಹೋದ, ಹೇಗೆ ಕೃತ್ಯ ಎಸಗಿದ, ಆರೋಪಿಯನ್ನು ಯಾರಾದರೂ ನೋಡಿರುವ ಸಾಧ್ಯತೆ ಇದೆಯೇ? ಘಟನಾ ಸ್ಥಳದ ಸುತ್ತಾ ಏನೇನಿದೆ ಎಂಬುದನ್ನು ಮಹಜರು ವರದಿ ಹಾಗೂ ಪಂಚನಾಮೆ ತಿಳಿಸುತ್ತದೆ. ಇದು ಅಪರಾಧ ಘಟನೆಯ ಸಂಕ್ಷಿಪ್ತವಾದ ಚಿತ್ರಣ ನೀಡುತ್ತದೆ. ಈ ಎಲ್ಲ ವಿವರಗಳು ತಿಳಿಯದೆ ಹೋದರೆ ತನಿಖೆ ಸರಿದಾರಿಯಲ್ಲಿ ಹೇಗೆ ಹೋಗುತ್ತದೆ. ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು.
ತನಿಖಾಧಿಕಾರಿ ಸೂಕ್ತವಾಗಿ ಮಹಜರು ಮಾಡಬೇಕು. ಮಾಸ್ಕ್ ಧರಿಸಿ ಶವ ಪರೀಕ್ಷೆ ನಡೆಯುವ ಸ್ಥಳಕ್ಕೆ ಧಾವಿಸಬೇಕು. ಕ್ರಿಮಿನಲ್ ಕಾನೂನು ಬಗೆಗಿನ ಜ್ಞಾನ ತನಿಖಾಧಿಕಾರಿಯಾದವರಿಗೆ ತಿಳಿದಿರಬೇಕು. ಅದಕ್ಕಾಗಿ ಸರ್ಕಾರಿ ವಕೀಲರು-ಕಾನೂನು ತಜ್ಞರು ನಿಯಮಿತವಾಗಿ ಕಾರ್ಯಕ್ರಮ ನಡೆಸಿ ಕಾನೂನು ಬಗ್ಗೆ ಮಾಹಿತಿ ನೀಡಬೇಕೆಂದು ಸರ್ಕಾರಿ ಅಭಿಯೋಜಕರಿಗೆ ನ್ಯಾಯಮೂರ್ತಿಗಳು ಸಲಹೆ ನೀಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 8 =
Remember me
