ಬೆಂಗಳೂರು:ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ, ಹುಷಾರ್! ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಶಾಲಾ-ಕಾಲೇಜುಗಳ ಆರಂಭಕ್ಕೆ ಶಿಕ್ಷಕ ಸಮುದಾಯ, ಶಾಲಾಭಿವೃದ್ಧಿ ಉಸ್ತುವಾರಿ ಸಮಿತಿ ಹಾಗೂ ಪೋಷಕರ ಅಭಿಪ್ರಾಯವನ್ನು ಸರ್ಕಾರ ಸಂಗ್ರಹಿಸುತ್ತಿರುವುದೇನೋ ಸರಿ. ಆದರೆ, ಅತಿರೇಕದ ನಿರ್ಧಾರ ಅನಾಹುತಕ್ಕೆ ದಾರಿಯಾಗುತ್ತದೆ. ಆದ್ದರಿಂದ ಶಾಲೆ ಆರಂಭಿಸುವ ಯಾವುದೇ ನಿರ್ಧಾರವನ್ನು ತಕ್ಷಣ ಕೈಗೊಳ್ಳಬಾರದು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ.
ನೆರೆಯ ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾದ ಮೂರೇ ದಿನದಲ್ಲಿ 260ಕ್ಕೂ ಹೆಚ್ಚು ಮಕ್ಕಳು ಹಾಗೂ 160ಕ್ಕೂ ಹೆಚ್ಚು ಶಿಕ್ಷಕರಿಗೆ ಕರೊನಾ ಸೋಂಕು ತಗುಲಿರುವ ವರದಿ ತೀವ್ರ ಆತಂಕಕಾರಿ ಬೆಳವಣಿಗೆ. ಇದು ರಾಜ್ಯದಲ್ಲಿ ಪೋಷಕರ ಜಂಘಾಬಲವನ್ನೇ ಉಡುಗಿಸಿದೆ. ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲಿ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯದ ಪ್ರಾಣದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ನಾಗರಿಕ ಸಮಾಜ ಒಪ್ಪದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈ ಹಿಂದೆಯೇ ಸರ್ಕಾರಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂದು ಸಲಹೆ ನೀಡಿದ್ದೆ. ಮದ್ದಿಲ್ಲದ ಕರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ. ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಟಾಕಿ ಬ್ಯಾನ್​ ಆದ್ರೂ ಖರೀದಿ ಬಲು ಜೋರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seventeen =
Remember me
