ಬೆಂಗಳೂರು:ಅಪರಾಧ ನಡೆದ ಸ್ಥಳದಲ್ಲಿ ಆರೋಪಿಯ ಉಪಸ್ಥಿತಿ ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರ ಲಭ್ಯವಿಲ್ಲದ ಸಂದರ್ಭದಲ್ಲಿ ಆತನ ವಿರುದ್ಧ ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 114ರ ಪ್ರಕಾರ ಯಾವುದೇ ಪ್ರತಿಕೂಲವಾದ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಸುರೇಶ್ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ಮತ್ತು ವರದಕ್ಷಿಣೆ ಕಿರುಕುಳ ಆರೋಪ ಸಂಬಂಧ 1 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಮೈಸೂರಿನ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 2018ರ ಡಿ17ರಂದು ಆದೇಶಿಸಿತ್ತು.
ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುರೇಶ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಪೀಠ, ಘಟನಾ ಸ್ಥಳದಲ್ಲಿ ಆರೋಪಿಯ ಉಪಸ್ಥಿತಿ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಜೀವಾವಧಿ ಶಿಕ್ಷೆ ರದ್ದುಪಡಿಸಿದೆ. ಆದರೆ, ಅರ್ಜಿದಾರ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾಕಷ್ಟು ಸಾಕ್ಷ್ಯಾಧಾರ ಲಭ್ಯವಿರುವ ಹಿನ್ನೆಲೆಯಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ಕೋರ್ಟ್ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.
ಹೈಕೋರ್ಟ್ ಹೇಳಿದ್ದೇನು?:ಮಹಿಳೆ ಮೃತಪಟ್ಟ ದಿನದಂದು ಘಟನಾ ಸ್ಥಳದಲ್ಲಿ ಆಕೆಯ ಪತಿ ಉಪಸ್ಥಿತನಿದ್ದ ಎಂಬುದನ್ನು ಪ್ರಾಸಿಕ್ಯೂಷನ್ ಮೊದಲಿಗೆ ಸಾಬೀತುಪಡಿಸಬೇಕಾಗುತ್ತದೆ. ಈ ಪ್ರಕರಣದಲ್ಲಿ ಆರೋಪಿಯ ಪತ್ನಿ ಮೃತಪಟ್ಟಿದ್ದ ಸ್ಥಳದಲ್ಲಿ ಆತನೂ ಆಕೆಯ ಜತೆಗಿದ್ದ ಎಂಬುದನ್ನು ಯಾವುದೇ ಸಾಕ್ಷ್ಯಾರದೊಂದಿಗೆ ಪ್ರಾಸಿಕ್ಯೂಷನ್ ಸಾಬೀತುಪಡಿಸಿಲ್ಲ. ಆದ್ದರಿಂದ, ವಿಚಾರಣಾ ನ್ಯಾಯಾಲಯ ಆರೋಪಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ತೀರ್ವನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 114ರ ಪ್ರಕಾರ ಆತನ ವಿರುದ್ಧ ಯಾವುದೇ ಪ್ರತಿಕೂಲವಾದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಹಾಗೂ ಪತ್ನಿಯನ್ನು ಕೊಲೆ ಮಾಡಿರುವುದಕ್ಕೆ ಕಾರಣ ಬಹಿರಂಗಪಡಿಸುವಂತೆ ಕಾಯ್ದೆಯ ಸೆಕ್ಷನ್ 106ರ ಅನುಸಾರ ನ್ಯಾಯಾಲಯ ಆರೋಪಿಯನ್ನು ಕೇಳಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್ ಜೀವಾವಧಿ ಶಿಕ್ಷೆ ರದ್ದುಪಡಿಸಿದೆ.
ಪ್ರಕರಣವೇನು?:2012ರ ಡಿ.14ರಂದು ಆರೋಪಿಯ ಪತ್ನಿ ಮನೆಯಲ್ಲಿ ಮೃತಪಟ್ಟಿದ್ದರು. ಆಕೆಯ ಗಂಡನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ಮೃತಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸುರೇಶ್ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಮಗಳನ್ನು ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಸುರೇಶ್ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ದೌರ್ಜನ್ಯ ಆರೋಪದಡಿ ಎಫ್​ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.
ಸಂಶಯಾತೀತವಾಗಿರಬೇಕು:ಆರೋಪಿಯೇ ಕೊಲೆ ಮಾಡಿದ್ದಾನೆ ಎನ್ನುವ ಬಲವಾದ ಸಂಶಯವಿದ್ದರೂ, ಅದನ್ನು ಪುರಾವೆಗಳ ಸಹಿತ ಸಾಬೀತುಪಡಿಸಬೇಕಾಗುತ್ತದೆ. ‘ನಿಜವಾಗಿರಬಹುದು’ ಹಾಗೂ ‘ನಿಜವೇ ಆಗಿರಬೇಕು’ ಈ ಎರಡೂ ಶಬ್ದಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಆದ್ದರಿಂದ, ಶಿಕ್ಷೆ ವಿಧಿಸಬೇಕಾದರೆ ಆತನೇ ಕೊಲೆ ಮಾಡಿದ್ದಾನೆ ಎನ್ನುವುದನ್ನು ಪ್ರಾಸಿಕ್ಯೂಷನ್ ಸಂಶಯಾತೀತವಾಗಿ ರುಜುವಾತು ಪಡಿಸಬೇಕಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ.
ಬಾಲಿವುಡ್​ ಸ್ಟಾರ್​ಗಳಿಗೆ ಸವಾಲೆಸೆದ ರಾಮ್​ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!

ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
