ಬೆಂಗಳೂರು:ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದರೂ ಅಗತ್ಯ ವಸ್ತುಗಳ ಕೊರತೆ ಇಲ್ಲ. ಜನ ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕರೊನಾ ನಿಯಂತ್ರಣ ಕುರಿತಂತೆ ಬೆಂಗಳೂರಿನ ಶಾಸಕರು, ಸಂಸದರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆ ಎಲ್ಲವೂ ದಾಸ್ತಾನಿದೆ. ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿ ಮಾಡಲಾಗುತ್ತಿದೆ. ಹಾಗಾಗಿ ಜನ ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಕಟ್ಟಡ ಕಾರ್ವಿುಕರಿಗೆ ಅರ್ಧ ಲೀ. ಹಾಲು: ವಲಸಿಗರಿಗೆ ಶಾಲೆ ಮತ್ತು ಸಮುದಾಯ ಭವನಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಕಟ್ಟಡ ಕಾರ್ವಿುಕರಿಗೆ ಅರ್ಧ ಲೀಟರ್ ಹಾಲು ಕೊಡಲು ತೀರ್ಮಾನ ಮಾಡಿದ್ದೇವೆ. ಯಾರಿಗೂ ಅಗತ್ಯ ವಸ್ತುಗಳ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರೊನಾ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳುತ್ತಿದ್ದೇವೆ. ವಿದೇಶದಿಂದ ಭಾರತಕ್ಕೆ ಬಂದ ಅಂತಾರಾಷ್ಟ್ರೀಯ ಪ್ರವಾಸಿಗರ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅದಕ್ಕಾಗಿ ಕೋವಿಡ್-19 ಸಮರ ಕೊಠಡಿಗಳನ್ನು
ಸ್ಥಾಪನೆ ಮಾಡಿದ್ದೇವೆ. ಈ ಮಾರಕ ನಿಯಂತ್ರಣ ಮಾಡಲು ಬಿಗಿಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದರು.
ಎಪಿಎಲ್ ಕುಟುಂಬಕ್ಕೂ ಆಹಾರ ಧಾನ್ಯ: ಎಪಿಎಲ್ ಕುಟುಂಬಗಳಿಗೂ ಸಹ ರಾಜ್ಯ ಸರ್ಕಾರ ಅಹಾರ ಧಾನ್ಯ ಪೂರೈಸುತ್ತಿದೆ. ಅಸಂಘಟಿತ ವಲಯದ ಶ್ರಮಿಕ ವರ್ಗದ ಜನರಿಗೆ ಅಶ್ರಯ ನೀಡುವ ವ್ಯವಸ್ಥೆಗಳನ್ನು ಮಾಡುತ್ತಿದ್ದು, ಉಚಿತವಾಗಿ ಅಹಾರವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ವೆಂಟಿಲೇಟರ್​ನಲ್ಲಿ ಯಾರೂ ಇಲ್ಲ
ಕರೊನಾ ಸೋಂಕಿತರ ಪೈಕಿ ಯಾರೂ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ರಾಜ್ಯದಲ್ಲಿ ಇದುವರೆಗೆ 144 ಕರೊನಾ ಪ್ರಕರಣ ದಾಖಲಾಗಿದ್ದು 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಲಾಕ್ ಡೌನ್​ಕಟ್ಟುನಿಟ್ಟಾಗಿ ಪಾಲಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು. ಪಕ್ಷಭೇದ ಇಲ್ಲದೇ ಒಗ್ಗಟ್ಟಾಗಿ ಕೆಲಸ ಮಾಡಲು ಸಚಿವರು, ಸಂಸದರು, ಶಾಸಕರು ಸಹಮತ ವ್ಯಕ್ತಪಡಿಸಿದ್ದಾರೆ ತಿಳಿಸಿದರು. ಬಿಬಿಎಂಪಿಯಿಂದ ಎಲ್ಲ ಕಡೆ ಔಷಧ ಸಿಂಪಡಣೆ ನಡೆಯುತ್ತಿದೆ. ಲಾಕ್​ಡೌನ್ ಸಮರ್ಪಕವಾಗಿ ಜಾರಿಗೆ ತರಲು ಬಿಗಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಹಣ ವಸೂಲಿ ಮಾಡಿದರೆ ಕ್ಷಮೆ ಇಲ್ಲ
500 ಚೆಕ್​ಪೋಸ್ಟ್ ಸ್ಥಾಪನೆ ಮಾಡಲಾಗಿದ್ದು, ಅಂತಾರಾಜ್ಯ ಸಂಚಾರ ನಿರ್ಬಂಧ ಮಾಡಲಾಗಿದೆ. ವಲಸಿಗರಿಗೆ ಶಾಲೆ, ಸಮುದಾಯ ಭವನಗಳಲ್ಲಿ ಊಟದ ವ್ಯವಸ್ಥೆ ಮಾಡಿದ್ದೇವೆ. ಹಣ ವಸೂಲಿ ಮಾಡುವ ಪೊಲೀಸರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಂತಹವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ ವಿತರಣೆಗೆ ತಡೆ ನೀಡಿದ್ದು, ಹಿಂದಿನಂತೆ ಐದು, ಹತ್ತು ರೂ.ಗೆ ತಿಂಡಿ, ಊಟ ವಿತರಣೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು ಕರಗ ಸರಳವಾಗಿ ಅಚರಣೆ: ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗವನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ನಾಲ್ಕೈದು ಮಂದಿ ಇದ್ದು ಕರಗ ಆಚರಿಸಲು ಸೂಚನೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಪಿಎಸ್​ಐ ಪರೀಕ್ಷೇಲಿ ಗೋಲ್​ಮಾಲ್?: ಒಂದೇ ಕೇಂದ್ರದ 50 ಅಭ್ಯರ್ಥಿಗಳು ಆಯ್ಕೆ ಆಗಿದ್ದು ಹೇಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + twelve =
Remember me
