ಬೆಂಗಳೂರು:ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳದಿದ್ದರೆ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂಬುದು ನಮ್ಮ ಆಗ್ರಹ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಇಂತಹ ಸ್ಥಿತಿ ಎಂದೂ ಆಗಿರಲಿಲ್ಲ. ಕಂಡುಕೇಳರಿಯದ ಪ್ರವಾಹ ಬಂದಿದೆ, ಸಂತ್ರಸ್ತರ ಪುನನಿರ್ವಣದ ಕಾರ್ಯ ಇನ್ನೂ ಆಗಿಲ್ಲ. ಇಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಇದರ ನಡುವೆ ಬೆಲೆ ಏರಿಕೆ ಮಾಡಲಾಗಿದೆ. ತೊಗರಿ ಖರೀದಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು, ಘೋಷಣೆ ಮಾಡಿ 20 ದಿನವಾದರೂ ಖರೀದಿ ಮಾಡುತ್ತಿಲ್ಲ, ರೈತರ ಬಗ್ಗೆ ಕೊಂಚವೂ ಕಾಳಜಿ ಇಲ್ಲ ಎಂದು ಆರೋಪಿಸಿದರು.
ರಮೇಶ್​ಕುಮಾರ್ ವಿರುದ್ಧ ಗುಡುಗು
ಚಿತ್ರದುರ್ಗ/ದಾವಣಗೆರೆ:ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಷ್ಟು ಭೂ ಕಬಳಿಕೆ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರೇನು ಸತ್ಯಹರಿಶ್ಚಂದ್ರನ 19ನೇ ಸಂತತಿನಾ ಅಂತ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಗುಡುಗಿದ್ದಾರೆ. ಗೋಡ್ಸೆ ಸಂತತಿಯ ಯತ್ನಾಳ್ ಸದನದಲ್ಲಿರಲು ನಾಲಾಯಕ್ ಎಂಬ ರಮೇಶ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು. ನನ್ನ ಮೇಲೆ ನೀರಾವರಿ ಹೋರಾಟದ 23 ಕೇಸುಗಳಿವೆ.
ಅಷ್ಟು ಬಿಟ್ಟರೆ ಬೇರೆ ಯಾವ ಪ್ರಕರಣ ಇಲ್ಲ ಎಂದರು. ದೊರೆಸ್ವಾಮಿ ಹೋರಾಟದ ಸಮಯದಲ್ಲಿ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ಕೊಟ್ಟ ಯತ್ನಾಳ್, ಆ ಸಮಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಹುಟ್ಟಿದ್ರಾ ಎಂದು ಮರು ಪ್ರಶ್ನೆ ಹಾಕಿದರು.
ಇನ್ಮುಂದೆ ಒಂದೇ ಮದುವೆ, ಒಂದೇ ಮಗು. ಇದು ನಮ್ಮ ಮುಂದಿನ ಕಾರ್ಯಸೂಚಿಯಾಗಲಿದೆ. ದೇಶವೆಂದ ಮೇಲೆ ಒಂದೇ ಕಾನೂನು, ಒಂದೇ ದೇಶ ಅಂತ ಇರಬೇಕು. ಇದೇ ಕಾರಣಕ್ಕೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಆಲೋಚನೆ ಇದೆ.
| ಬಸನಗೌಡ ಪಾಟೀಲ್ ಯತ್ನಾಳ್ ಶಾಸಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 18 =
Remember me
