ತುಮಕೂರು:ರಕ್ಷಣೆ ಕೊಡಬೇಕಾದ ಪೊಲೀಸಪ್ಪನೇ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಪತಿರಾಯನ ಕಿರುಕುಳಕ್ಕೆ ಬೇಸತ್ತ ಪತ್ನಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಸಂತ್ರಸ್ತ ಮಹಿಳೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್​ ಕುಮಾರ್​, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ, ಒಂದೂವರೆ ವರ್ಷದ ಹಿಂದೆ ಸುನೀಲ್​ ಕುಮಾರ್​ನನ್ನು ವರಿಸಿದ್ದಾರೆ. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿತು. ಈ ವೇಳೆ ಅವರ ಮನೆಯವರೇ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿದ್ದರು.
ಇದನ್ನೂ ಓದಿ:ಏಕಕಾಲ ಚುನಾವಣೆ ಮುನ್ನೆಲೆಗೆ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ಸಾರಥ್ಯದಲ್ಲಿ ಸಮಿತಿ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ
ಮದುವೆಯ ಸಂದರ್ಭದಲ್ಲಿ 25 ಗ್ರಾಂ ಚಿನ್ನದ ಸರ, 12 ಗ್ರಾಂ ಉಂಗುರ ಹಾಗೂ 30 ಗ್ರಾಂ ಬಂಗಾರದ ಬಳೆಯನ್ನು ವರದಕ್ಷಿಣೆ ನೀಡಿ, ಸುಮಾರು 18 ಲಕ್ಷ ರೂಪಾಯಿ ಖರ್ಚು ಮಾಡಿ, ಅರಸೀಕೆರೆ ವೀರಶೈವ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದರೆ, ಕಳೆದ ಒಂದು ವರ್ಷದಿಂದ ಸುನೀಲ್​ ನಿರಂತರವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಸಹನಾ ಆರೋಪ ಮಾಡಿದ್ದಾರೆ.
ಮನೆ ಕಟ್ಟಬೇಕು, ಕಾರು ತಗೋಬೇಕು, 20 ಲಕ್ಷ ಹಣ ತಗೊಂಡು ಬಾ ಎಂದು ನಿರಂತವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದಾರಂತೆ. ಅಲ್ಲದೆ ಲಾಠಿಯಿಂದ ಥಳಿಸಿರುವ ಆರೋಪವೂ ಕೇಳಿಬಂದಿದೆ. ಹೀಗಾಗಿ ಸುನಿಲ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿಗೆ ಸಹನಾ ದೂರು ನೀಡಿದ್ದು, ಎಸ್.ಪಿ ಆದೇಶದ ಮೇರೆಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ಗೃಹಿಣಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ಮತ್ತೊಬ್ಬನ ಮೇಲಿನ ಸೇಡಿಗೆ ಸ್ನೇಹಿತನನ್ನೇ ಕೊಂದ!

ವಿರಳ ವಿರಹ ಗೀತೆ: ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ವಿಮರ್ಶೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve + 16 =
Remember me
