ಮಂಗಳೂರು: ಕನ್ನಡ ರಾಜ್ಯೋತ್ಸವ (ನ.1) ರಂದು ಪುನೀತ್​ ರಾಜ್​ಕುಮಾರ್​ಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ 2009ರಲ್ಲಿ ಡಾ.ಡಿ.ವೀರೇಂದ್ರ ‌ಹೆಗ್ಗಡೆಯವರಿಗೆ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಿತ್ತು. ಈ ಬಾರಿ ಪುನೀತ್​​ ರಾಜ್​ಕುಮಾರ್​​ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ವಿಡಿಯೋ ಮೂಲಕ ಧರ್ಮಾಧಿಕಾರಿಗಳು ಪುನೀತ್​​ನ ಸೇವಾ ಮನೋಭಾವ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ್ದಾರೆ.
ಈ ಕುರಿತು ಮಾತನಾಡಿದ ಹೆಗ್ಗಡೆ ಅವರು ‘ಡಾ. ರಾಜ್​ಕುಮಾರ್​​ ನನಗೆ ಅತ್ಯಂತ ಪ್ರಿಯವಾದವರು. ಅವರಿಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಅಪಾರ ಗೌರವವಿತ್ತು. ಅವರ ಪುತ್ರನಾಗಿರುವ ಪುನೀತ್​​, ತನ್ನ ವೈಯಕ್ತಿಕ ವ್ಯಕ್ತಿತ್ವ, ನಟನೆ, ಮತ್ತು ಸ್ವಭಾವದಿಂದಾಗಿ ಎಲ್ಲರಿಗೂ ಅಚ್ಚುಮೆಚ್ಚು. ಅವರ ಸಾವನ್ನು ಇನ್ನೂ ನಮ್ಮ ಕೈಯಲ್ಲಿ ಅರಗಿಸಿಕೊಳ್ಳಲು ಆಗುತ್ತಿಲ್ಲ.ಅಂಥಹ ಸಾವು ಆ ದೊಡ್ಡ ಮತ್ತು ಉತ್ತಮ ಭವಿಷ್ಯವಿದ್ದ ಕಲಾವಿದನಿಗೆ ಬರಬಾರದಿತ್ತು’ ಎಂದು ಅವರ ಕುಟುಂಬಕ್ಕೆ ಸಾಂತ್ವಾನ ಹೇಳುವ ಮೂಲಕ ಕರ್ನಾಟಕ ಪ್ರಶಸ್ತಿಗೆ ಆಯ್ಕೆಯಾದ ವಿಷಯದ ಕುರಿತು ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ‘ಪುನೀತ್​​ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಹನಾದಂತ ವ್ಯಕ್ತಿ. ಇದು ಮುಂದೆ ಎಲ್ಲಾ ಕಲಾವಿದರಿಗೂ ಸ್ಫೂರ್ತಿಯಾಗಬೇಕು. ಕನ್ನಡದ ಸೇವೆ, ಸ್ವಭಾವತ ಸ್ನೇಹಪರರಾಗಿದ್ದರೆ, ಜನ ಮತ್ತು ಸರ್ಕಾರ ಹೇಗೆ ನಮ್ಮನ್ನು ಸ್ಮರಿಸಿಕೊಳ್ಳುತ್ತಾರೆ ಎಂಬುದು ಇದರಿಂದ ಎಲ್ಲಾ ಕಲಾವಿದರಿಗೂ ಗೊತ್ತಾಗಲಿ’ ಎಂದಿದ್ದಾರೆ.
A post shared by D Veerendra Heggade (@dveerendraheggade)


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 1 =
Remember me
