ಬೆಂಗಳೂರು:ಗೆಳತಿ ಪವಿತ್ರಾಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸ್ಸೇಜ್​ ಕಳುಹಿಸಿದ್ದ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಹತ್ಯೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಗ್ಯಾಂಗ್​ನ ವಿರುದ್ಧ ಪೊಲೀಸರು ತನಿಖೆ ಪೂರ್ತಿಗೊಳಿಸಿ ಚಾರ್ಜ್​ಶೀಟ್​ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್​ಶೀಟ್​​ನ ಒಂದೊಂದು ಪುಟ ತೆರೆದಂತೆ ಆರೋಪಿಗಳ ಕರಾಳ ಮುಖ ಬಯಲಾಗುತ್ತಿದೆ. ಇತ್ತ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ನಟ ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ್​, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಆರೋಪಿಗಳ ಪರ ವಕೀಲರಿಗೆ ಒಂದು ಪ್ರತಿಯನ್ನು ನೀಡಲಾಗುತ್ತದೆ. ಬಳಿಕ ಅದು ಸಾರ್ವಜನಿಕವಾಗಿ ಲಭ್ಯವಾಗುತ್ತದೆ. ಸಹಜವಾಗಿ ಈ ಪ್ರಕರಣ ರಾಜ್ಯದ ಗಮನ ಸೆಳೆದಿರುವುದರಿಂದ ಮಾಧ್ಯಮಗಳಲ್ಲಿ ಆದ್ಯತೆಯ ಮೇರೆಗೆ ಅದನ್ನು ತೋರಿಸಲಾಗುತ್ತದೆ.
ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದು ಗೃಹಸಚಿವ ಪರಮೇಶ್ವರ್​ ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 1 =
Remember me
