ಬೆಂಗಳೂರು:ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದವರು ವಾದಿಸಿದರೆ, ಇನ್ನೂ ಕೆಲವರು ಲವ್​ ಜಿಹಾದ್​ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರು ನೀಡುತ್ತಿರುವ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಪರಮೇಶ್ವರ್, ನನ್ನ ಬಳಿ ಇದ್ದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ ರಾಹುಲ್
ಬಿಜೆಪಿಯವರು ಈ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದು, ಎಬಿವಿಪಿ ಅವರಿಗೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊರತೆ ಇರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ನಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ ಎಂದಿದ್ದಾರೆ.
ನಮ್ಮ ಬಳಿ ಇದ್ದ ಮಾಹಿತಿ ಆಧರಿಸಿ ಹೇಳಿಕೆ ಕೊಟ್ಟಿದ್ದೇವೆ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಪರಮೇಶ್ವರ್ ನೇಹಾ ಕೊಲೆ ಪ್ರಕರಣದ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 13 =
Remember me
