ಬೆಂಗಳೂರು:ನಗರ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ್​ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ತಿಳಿಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇವೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ.
ಇದನ್ನೂ ಓದಿ:ವಯನಾಡು ಭೂಕುಸಿತ; ಸಂತ್ರಸ್ತರಿಗೆ ಕರ್ನಾಟಕದ ವತಿಯಿಂದ 100 ಮನೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ. ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ‌ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರು ಇದ್ದರು ಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರು ಸಹ ಎಫ್ಐಆರ್ ದಾಖಲಿಸುತ್ತಾರೆ.
ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡೀಷನ್ ಹಾಕಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − one =
Remember me
