ತುಮಕೂರು:ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ, ಬಿವಿಬಿ ಕಾಲೇಜು ಎಂಸಿಎ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆಗಳನ್ನು ಬರೆದ ರೋಹಿತ್​ ಶರ್ಮಾ; ಏನದು?
ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ನೇಹಾಳ ಕೊಲೆ ಮಾಡಿದ್ದಾನೆ. ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲವ್ ಜಿಹಾದ್​ ಕಂಡು ಬಂದಿಲ್ಲ ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೋಪದಲ್ಲಿ ಕೊಲೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seventeen =
Remember me
