ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಯಲು ‘ಆ್ಯಂಟಿ ಕಮ್ಯುನಲ್ ವಿಂಗ್’ ಎಂಬ ನೂತನ ಪೊಲೀಸ್ ಪಡೆಯನ್ನು ಗೃಹ ಸಚಿವ ಜಿ ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ಪಡೆ ಕಾರ್ಯನಿರ್ವಹಿಸಲಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚು ನಡೆಯುತ್ತಿದೆ. ಇದನ್ನು ನಾವು ತಡೆಯದಿದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಪ್ರಾರಂಭ ಮಾಡುತ್ತಿದ್ದೇವೆ. ಈ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ನೀವು ದಿನಚರಿ ಹೇಗೆ ಪ್ರಾರಂಭಿಸುತ್ತೀರಿ? ಸ್ಮೃತಿ ಇರಾನಿ ನೀಡಿದ ಸಲಹೆ ಹೀಗಿದೆ…
ಪೊಲೀಸ್ ಇಲಾಖೆಗೆ ಸಾಕಷ್ಟು ಸವಾಲುಗಳಿವೆ. ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂಬುದನ್ನು ಇಡೀ ದೇಶವೇ ನಂಬುತ್ತದೆ. ಇದರ ಜತೆಗೆ ಜಿಲ್ಲೆಯಲ್ಲಿ ಶಾಂತಿ, ಕೋಮು ಸಾಮರಸ್ಯ ಇಲ್ಲ ಎಂಬ ಮಾತಿದೆ. ಶಾಂತಿ-ಸೌಹಾರ್ದತೆ ಇಲ್ಲ ಎಂಬ ಕಾರಣ ಮುಂದಿಟ್ಟುಕೊಂಡು ಮಂಗಳೂರಿಗೆ ಕಂಪೆನಿಗಳು ಹೂಡಿಕೆ ಮಾಡಲು ಬರುತ್ತಿಲ್ಲ. ಯಾವ ಧೈರ್ಯದಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಮಾಡಬೇಕು ಎಂದು ಕೇಳುತ್ತಾರೆ. ಇನ್ನು ಮುಂದೆ ಕೋಮು ಭಾವನೆಗಳನ್ನು ಪ್ರಚೋದನೆ ಮಾಡುವವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಇಲಾಖೆಗೆ ಹಳೆಯ ಪ್ರಕರಣಗಳ ಫಾಲೋ ಅಪ್ ಮಾಡಲು ಸೂಚನೆ ನೀಡಿದ್ದು, ಪ್ರಕರಣಗಳ ಜವಾಬ್ದಾರಿಯನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದರು.
ಪ್ರಣಾಳಿಕೆ ಸಮಿತಿ ಅಧ್ಯಕ್ಷನಾದ ಸಂದರ್ಭದಲ್ಲಿ 20 ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದಾಗ, ಇಲ್ಲಿ ಶಾಂತಿ ಕಲ್ಪಿಸಿಕೊಡಿ ಎಂದು ಹೇಳಿದ್ದರು. ಈ ಹಿಂದೆ ಕೋಮು ಸೌಹಾರ್ದತೆಗಾಗಿ ಪಾದಯಾತ್ರೆಯನ್ನೂ ಮಾಡಿದ್ದೆ. ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ತಡೆದು, ಕೋಮು ಸೌಹಾರ್ದತೆ ತರಲು ಪೊಲೀಸರಿಗೆ ಕಠಿಣ ಸೂಚನೆ ನೀಡಿದ್ದೇನೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 13 =
Remember me
