ಧರ್ಮಸ್ಥಳ:ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವೀರ ಕಂಬಳ ಸಿನಿಮಾಗೆ ಬಣ್ಣ ಹಚ್ಚಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದಾರೆ,
ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದ್ದು ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಥೆ, ತುಳುನಾಡಿನ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ.
ಈ ಸಿನಿಮಾ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆಯನ್ನು ಹೆಣೆಯಲಾಗಿದೆಯಂತೆ. ಆಗೊಮ್ಮೆ ಈಗೊಮ್ಮೆ ಕನ್ನಡ ಸಿನಿಮಾಗಳಲ್ಲಿ ಸಣ್ಣದಾಗಿ ಕಂಬಳ ಕ್ರೀಡೆಯನ್ನು ತೋರಿಸಲಾಗುತ್ತಿತ್ತು. ಇತ್ತೀಚೆಗೆ ‘ಕಾಂತಾರ’ ಸಿನಿಮಾದಲ್ಲೂ ಕಂಬಳ ಕಾಣಿಕೊಂಡಿದ್ದು ನಂತರ ತುಳುನಾಡಿನ ವೈಭವ ಜಗತ್ತಿನಾದ್ಯಂತ ಹಬ್ಬಿದೆ.
“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದು ಸದ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿದ್ದಾರೆ. ಇದೀಗ ಧರ್ಮಸ್ಥಳದ ಬೀಡಿನಲ್ಲಿ (ಬೀಡು ಎಂದರೆ ಮನೆ) ಅವರು ಮೇಕಪ್​ ಮಾಡಿಕೊಳ್ಳುತ್ತಿರುವ ಫೋಟೊ ಫುಲ್​ ವೈರಲ್​ ಆಗಿದೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ.
ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
A post shared by Cinemagalli.com (@cinemagalli)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
