ಚಿಕ್ಕಬಳ್ಳಾಪುರ:ಮಾಜಿ ಸಚಿವ ಡಾ.ಕೆ. ಸುಧಾಕರ್ ಒಬ್ಬ ಅಯೋಗ್ಯ. ಕಾಂಗ್ರೆಸ್​ ಟಿಕೆಟ್​ಗಾಗಿ ಅವರಿವರ ಕಾಲಿಗೆ ಬೀಳುತ್ತಿದ್ದಾನೆ ಎಂದು ಶಾಸಕ ಪ್ರದೀಪ್​ ಈಶ್ವರ್ ಏಕವಚನದಲ್ಲೇ​ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ದಕ್ಷಿಣ ಭಾರತದ ನಿರ್ದೇಶಕನ ಜೊತೆ ಸಿನಿಮಾ ಘೋಷಿಸಿದ ನಟ ಸಲ್ಮಾನ್ ಖಾನ್!
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಎಂಪಿ ಟಿಕೆಟ್ ಮಿಸ್ ಆದ್ರೆ, ಕಾಂಗ್ರೆಸ್​ನಿಂದ ಬೆಂಗಳೂರು ಉತ್ತರದಲ್ಲಿ ಸ್ಪರ್ಧೆಗೆ ಸುಧಾಕರ್ ಪ್ರಯತ್ನ ಮಾಡ್ತಿದ್ದಾರೆ. ಬೆಂಗಳೂರು ಉತ್ತರದ ಕಾಂಗ್ರೆಸ್​ ಟಿಕೆಟ್​ಗಾಗಿ ಅವರಿವರ ಕಾಲಿಗೆ ಬೀಳ್ತಿದ್ದಾನೆ ಎಂದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಡಬ್ಬಲ್‍ಗೇಂ ಏಕೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಲ್ಲಿದ್ದು, ಮೋಸ ಮಾಡಿ ಹೋದರು. ಇದರ ಪರಿಣಾಮ ನನ್ನಂತಹ ಸಾಮಾನ್ಯ ಹುಡುಗ ಅವರನ್ನು ಚುನಾವಣೆಯಲ್ಲಿ ಸೋಲಿಸುವಂತಾಯಿತು. ಇದ್ದರೆ ನೆಟ್ಟಗೆ ಬಿಜೆಪಿಯಲ್ಲಿ ಇರಿ. ಭವಿಷ್ಯವಾದರೂ ಇರುತ್ತದೆ. ಅದನ್ನು ಬಿಟ್ಟು ಕಾಂಗ್ರೆಸ್‍ಗೆ ಬಂದರೆ ನಮ್ಮ ಪಕ್ಷದ ಕಚೇರಿಯ ಹೊರಗೆ ಇಟ್ಟಿರುವ ಕಸದ ಬುಟ್ಟಿಗಿಂತಲೂ ಕಡೆಯಾಗಿ ನೋಡುತ್ತಾರೆ ಎಂದು ಲೇವಡಿ ಮಾಡಿದರು.
ಸುಧಾಕರ್​ ಬಿಜೆಪಿಯಲ್ಲಿಯೇ ಇದ್ದು, ಯಾವುದಾದರೂ ಹೊಸ ಕ್ಷೇತ್ರವನ್ನು ನೋಡಿಕೊಳ್ಳಲಿ, ಅವರು ಶ್ರೀಮಂತರಿಗಾಗಿ ಕೆಲಸ ಮಾಡಲಿ. ಸುಧಾಕರ್ ಜೀವನಪರ್ಯಂತ ಮಾಜಿ ಶಾಸಕರಾಗಿಯೇ ಉಳಿಯಬೇಕಾಗಿದೆ ಎಂದು ಟೀಕಿಸಿದರು.
ಆನೆ ಹೋಗುವಾಗ ನಾಯಿ ಬೊಗಳುತ್ತೆ :ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಿಸುವುದಾಗಿ ಹೇಳಿದ್ದಾರೆ. ಅವರಷ್ಟೇ ಅಲ್ಲ, ಅವರಪ್ಪ, ಅವರ ತಾತ, ಅವರಿಂದಲೂ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ. ಆನೆ ಹೋಗುವಾಗ ನಾಯಿ ಬೊಗಳುತ್ತೆ ಎಂದು ಅನಂತಕುಮಾರ್ ಹೆಗಡೆ ಕಥೆ ಹೇಳಿದ್ದಾರೆ. ಅದರಲ್ಲಿ ಆನೆ ಎಂದರೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ನೊಂದು ಪ್ರಾಣಿ ಇದೆಯಲ್ಲ ಅದು ಅನಂತಕುಮಾರ್ ಹೆಗಡೆಯವರಾ ಎಂದು ತಿರುಗೇಟು ನೀಡಿದರು.
ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು: ನಟ ಶಿವರಾಜ್ ಕುಮಾರ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eight =
Remember me
