ಬೆಂಗಳೂರು:ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪ್ರದೀಪ್​ ಈಶ್ವರ್, ಡಾ. ಸುಧಾಕರ್ ವಿರುದ್ಧ 75582 ಮತಗಳನ್ನು ಪಡೆದು 10 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ. ಸುಧಾಕರ್ ಅವರನ್ನು ಮಣಿಸಿ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ. ತಮ್ಮ ತೆಲುಗು ಡೈಲಾಗ್‍ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್ ಈಶ್ವರ್ ಗಮನ ಸೆಳೆದಿದ್ದರು. ಸದ್ಯ ಅವರ ಡೈಲಾಗ್ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆದರೆ ಇದೀಗ ಪ್ರದೀಪ್​ ಈಶ್ವರ್​ ವಿರುದ್ಧ, ಡಾ. ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸಾರ್ವಜನಿಕವಾಗಿ ಮಾನಹಾನಿ ಆಗುವಂತೆ ಡಾ. ಸುಧಾಕರ್​ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿದ್ದರು ಎನ್ನುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಪ್ರದೀಪ್​ ಈಶ್ವರ್​ ವಿರುದ್ಧ ಮಾಜಿ ಸಚಿವ ಡಾ. ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಅರ್ಜಿ ಸಲ್ಲಿಸಿರುವ ಡಾ. ಸುಧಾಕರ್, ಖಾಸಗಿ ದೂರು ಸಲ್ಲಿಸಿದ್ದು ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಲು ಸುಧಾಕರ್ ಮನವಿ ಮಾಡಿದ್ದಾರೆ.
ಡಾ.ಕೆ.ಸುಧಾಕರ್ ವಿರುದ್ಧ ಅವಮಾನಕರ ಹೇಳಿಕೆ ಹಿನ್ನಲೆ ಅರ್ಜಿ ಹಾಕಲಾಗಿದ್ದು (Criminal Deformation) ಅಪರಾಧಿಕ ಮಾನಹಾನಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತಾಗಿ ಜು.4 ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + nine =
Remember me
