ಬೆಂಗಳೂರು: ಕೊವಿಡ್​-19 ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಣೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ಎಚ್ಚರಿಕೆ ನೀಡಿದ್ದಾರೆ.
ಸುಧಾಕರ್​ ಅವರು ಇಂದು ಬೆಳಗ್ಗೆ ಟ್ವೀಟ್​ ಮಾಡಿ, ನಗರದಾದ್ಯಂತ 72 ಖಾಸಗಿ ಆಸ್ಪತ್ರೆಗಳಿಂದ 3331 ಹಾಸಿಗೆಗಳನ್ನು ಕೊವಿಡ್​-19 ಸೋಂಕಿತರಿಗೆ ಮೀಸಲಿಡಲಾಗಿದೆ. ಅದರಲ್ಲಿ ಶೇ.78ರಷ್ಟು ಖಾಲಿ ಇದೆ ಎಂದು ಹೇಳಿದ್ದರು. ಆದರೆ ವಾಸ್ತವಿಕವಾಗಿ ಅಷ್ಟೊಂದು ಬೆಡ್​​ಗಳು ಇನ್ನೂ ಸಿದ್ಧವಾಗಿಲ್ಲ. ಖಾಸಗಿ ಆಸ್ಪತ್ರೆಗಳು ಹೇಳಿದಷ್ಟು ಹಾಸಿಗೆಗಳನ್ನು ಇನ್ನೂ ಸರ್ಕಾರಕ್ಕೆ ಹಸ್ತಾಂತರ ಮಾಡಿಲ್ಲ ಎಂಬುದು ಪರಿಶೀಲನೆಯ ವೇಳೆ ಗೊತ್ತಾಗಿದೆ.
ಇಂದು ಜಯನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್​ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಡಾ. ಸುಧಾಕರ್​ ಅವರು ವಿಧಾನಸೌಧಕ್ಕೆ ವಾಪಸ್​ ಆಗಿ ಸುದ್ದಿಗೋಷ್ಠಿ ನಡೆಸಿ, ಖಾಸಗಿ ಆಸ್ಪತ್ರೆಗಳು ಇನ್ನೂ ಹೇಳಿದಷ್ಟು ಹಾಸಿಗೆಗಳನ್ನು ಸಿದ್ಧ ಮಾಡಿಲ್ಲ ಎಂದು ಹೇಳಿದರು.
ಸರ್ಕಾರ ಈಗಾಗಲೇ ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿದೆ. ಈ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಅರ್ಧದಷ್ಟು ಹಾಸಿಗೆಗಳನ್ನು ಕೊವಿಡ್​ ಚಿಕಿತ್ಸೆಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. ತಕ್ಷಣದಿಂದಲೇ 2734 ಬೆಡ್​ಗಳನ್ನು ಒದಗಿಸುವುದಾಗಿ ತಿಳಿಸಿದ್ದರು. ಆದರೆ ಇದುವರೆಗೆ ಕೇವಲ 116 ಬೆಡ್​​ಗಳನ್ನು ಮಾತ್ರ ಒದಗಿಸಿದ್ದಾರೆ ಎಂದು ಸುಧಾಕರ್​ ಅವರು ಮಾಹಿತಿ ನೀಡಿದರು.
ಇದುವರೆಗೆ ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಬಂದು ದಾಖಲಾಗಿರುವ ಕೊವಿಡ್​-19 ರೋಗಿಗಳ ಸಂಖ್ಯೆ 898 ಎಂಬ ಮಾಹಿತಿ ನಮಗೆ ಬಂದಿದೆ. ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಕೊಟ್ಟ ಮಾತಿನಂತೆ ನಡೆಯಬೇಕು. ಆದಷ್ಟು ಬೇಗ ಹೇಳಿದಷ್ಟು ಹಾಸಿಗೆಗಳನ್ನು ಹಸ್ತಾಂತರ ಮಾಡಬೇಕು. ಇದರ ಉಸ್ತುವಾರಿ ನೋಡಿಕೊಳ್ಳಲು ಕಂದಾಯ ಸಚಿವ ಆರ್​. ಅಶೋಕ್​ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್​ ಅವರನ್ನು ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಸೋಮವಾರದಿಂದಲೇ ಅವರು ಕಾರ್ಯೋನ್ಮುಖರಾಗಲಿದ್ದಾರೆ ಎಂದು ಹೇಳಿದರು.
ಕೊವಿಡ್​-19 ಪರೀಕ್ಷೆಗೆ ಹಣ ತೆಗೆದುಕೊಂಡಿಲ್ಲಕೊವಿಡ್​-19 ತಪಾಸಣೆಗೆ ನಾಲ್ಕರಿಂದ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ನೋಡಿದೆ. ಆದರೆ ಸರ್ಕಾರ ಇದುವರೆಗೆ ಆರು ಲಕ್ಷಕ್ಕೂ ಅಧಿಕ ಮಂದಿಗೆ ಕರೊನಾ ತಪಾಸಣೆ ಮಾಡಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸರ್ಕಾರದ ವತಿಯಿಂದ ಉಚಿತವಾಗಿಯೇ ಟೆಸ್ಟ್​ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಿದ್ದೇವೆ. ನಾವು ಕಳಿಸಿದ ರೋಗಿಗಳಿಗೆ 2200 ರೂ.ಪಡೆಯಬೇಕು. ಅದಕ್ಕಿಂತ ಹೆಚ್ಚಿಗೆ ಪಡೆದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೇವೆ ಎಂದು ಡಾ. ಸುಧಾಕರ್​ ವಿವರಿಸಿದ್ದಾರೆ.ಇದನ್ನೂ ಓದಿ:ಅಪ್ಪ-ಅಮ್ಮನಿಗೂ ಸೋಂಕು: 17 ದಿನದ ಕಂದನಿಗೆ ವೈದ್ಯರ ಕಣ್ಣೀರ ವಿದಾಯ!
‘ಇದಲ್ಲದೆ, ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದರು.
ದೂರು ಇದ್ದರೆ ಕರೆ ಮಾಡಿ:”ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ಟೆಸ್ಟ್‌ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ನಂಬರಿಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ 24 ಗಂಟೆ ಕೆಲಸ ಮಾಡುವ ಕಾಲ್​ಸೆಂಟರ್​ ಆರಂಭವಾಗಿದೆ ಎಂದರು.
ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಅದನ್ನು ನಿರೀಕ್ಷಿಸಿದ್ದೆವು. ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಆದರೆ ಹೆದರುವ ಅಗತ್ಯವಿಲ್ಲ. ಅದಕ್ಕೆ ತಕ್ಕಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವೈದ್ಯಕೀಯ ಸಿಬ್ಬಂದಿ ಹಗಲಿರುಳೂ ದುಡಿಯುತ್ತಿದ್ದಾರೆ. ವಾಸ್ತವ ಸಂಗತಿ ಅರ್ಥ ಮಾಡಿಕೊಂಡು ಸಾರ್ವಜನಿಕರು, ಪ್ರತಿಪಕ್ಷದ ನಾಯಕರು, ಸರ್ಕಾರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಇದನ್ನೂ ಓದಿ:ಹಣಕಾಸು ಸಚಿವೆಗೆ ವಿಷಕಾರಿ ಹಾವು ಎಂದ ಸಂಸದನ ವಿರುದ್ಧ ಬಿಜೆಪಿ ಕಿಡಿ…
ಹಿರಿಯ ನಾಗರಿಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹಿರಿಯರನ್ನು ಆದಷ್ಟು ಮನೆಯಿಂದ ಹೊರಗೆ ಹೋಗಲು ಬಿಡಬಾರದು ಎಂದರು.
ಮಂಗಳವಾರದಿಂದ ಮರುಜಾರಿ ಆಗುತ್ತಾ ಲಾಕ್‌ಡೌನ್? ನಾಳೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
