ಚಿಕ್ಕಬಳ್ಳಾಪುರ:18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್​ 04) ಹೊರಬಿದ್ದಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಡಾ.ಕೆ. ಸುಧಾಕರ್​ ಕಾಂಗ್ರೆಸ್​ನ ರಕ್ಷಾ ರಾಮಯ್ಯ ಎದುರು 95,863 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಡಾ.ಕೆ. ಸುಧಾಕರ್ 4,99,570 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್​ನ ರಕ್ಷಾ ರಾಮಯ್ಯ 4,03,707 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಎರಡನೇ ಗೆಲುವು ಸಿಕ್ಕಂತಾಗಿದೆ.
ಇತ್ತ ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್​ನ ಪ್ರದೀಪ್​ ಈಶ್ವರ್​ಗೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ. ಈ ಹಿಂದೆ ಚುನಾವಣೆ ಸಮಯದಲ್ಲಿ ಸುಧಾಕರ್‌ ವಿರುದ್ಧ ಸವಾಲೆಸೆದಿದ್ದ ಪ್ರದೀಪ್‌ ಈಶ್ವರ್‌, ಒಂದು ವೋಟ್‌ ಲೀಡ್‌ ಬಂದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಹೀಗಾಗಿ ಇದೀಗ ಸುಧಾಕರ್‌ ಅವರು ಗೆಲುವು ಸಾಧಿಸಿದ್ದು, ಇಂದೇ ಪ್ರದೀಪ್‌ ಈಶ್ವರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eleven =
Remember me
