ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇಗೌಡ ಅವರು ಕೋವಿಡ್ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದರು. ಕೆಲವು ದಿನಗಳ ಹಿಂದೆ ಕರೊನಾ ಸೋಂಕಿಗೆ ಒಳಗಾಗಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆ ಒದಗಿಸಲಾಗಿದ್ದರೂ ಅವರು ಬದುಕುಳಿಯಲಿಲ್ಲ.
ಕನ್ನಡ ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ, ಗಾಯಕರಾಗಿ, ಕನ್ನಡ ಸಂಸ್ಕೃತಿ ಚಿಂತಕರಾಗಿ ನಿರಂತರ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಿದ್ದ ಅವರು ಕನ್ನಡಪರ ಹೋರಾಟಗಾರರಾಗಿಯೂ ತೊಡಗಿಸಿಕೊಂಡಿದ್ದರು. ಅವರು 16 ವ್ಯಕ್ತಿಚಿತ್ರಗಳನ್ನಷ್ಟೇ ಅಲ್ಲದೆ 40ಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲದೆ, ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.
ಅಗಲಿದ ಕೋ.ವೆಂ. ರಾಮಕೃಷ್ಣೇಗೌಡ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಂಸ್ಕೃತಿ ಚಿಂತಕರಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಕೋ.ವೆಂ. ಅವರು ಕರೊನಾಗೆ ಬಲಿಯಾಗಿರುವುದು ನಿಜಕ್ಕೂ ದುರದೃಷ್ಟಕರ. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮತ್ತೊಂದು ಕ್ರಿಯಾಶೀಲ ಚೇತನವೊಂದನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ದಯಪಾಲಿಸಲಿ ಎಂದು ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮನೆಗೆ ಬರೋವರೆಗೂ ನಿಮಗೆ ಗೊತ್ತಾಗಲ್ಲ, ಅದೆಷ್ಟು ಕೆಟ್ಟದ್ದು ಅಂತ!: ‘ಪ್ರೇಮ್​ ಅಡ್ಡ’ದ ಹುಡುಗಿ ಹೀಗಂದಿದ್ಯಾಕೆ?
ಸ್ಮಶಾನದಲ್ಲೂ ಹೌಸ್​ಫುಲ್ ಬೋರ್ಡ್! ಶವಗಳ ಹೊತ್ತು ಕ್ಯೂ ನಿಂತ ಆಂಬುಲೆನ್ಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + two =
Remember me
