ಬೆಂಗಳೂರು:ರಾಜ್ಯದಲ್ಲಿ ಈ ಬಾರಿ ತೀವ್ರ ಗಮನ ಸೆಳೆದಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋದರ ಡಿಕೆ ಸುರೇಶ್‌ ಅವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಸೋಲಿಸಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳ: 50 ಸಾವಿರ ಮತಗಳ ಅಂತದಿಂದ ಗೆದ್ದ ಕ್ರಿಕೆಟಿಗ ಯೂಸುಫ್ ಪಠಾಣ್!
ಡಿಕೆ ಸುರೇಶ್‌ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 2,29,947 ಮತಗಳಿಗೂ ಹೆಚ್ಚು ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ 9,54,560 ಮತಗಳನ್ನು ಗಳಿಸಿದರೆ, ಡಿಕೆ ಸುರೇಶ್‌ 7,50,886 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿ ಸೋಲೊಪ್ಪಿಕೊಂಡಿದ್ದಾರೆ.

ಈ ಫಲಿತಾಂಶವು ರಾಜಕೀಯ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಈ ಹಿನ್ನಲೆ ಬೆಂಗಳೂರಿನ ಬನ್ನೇರುಘಟ್ಟ ಸರ್ಕಲ್​ನಲ್ಲಿ ಚಂಪಕಧಾಮ ದೇವಾಲಯದ ಬಳಿ ಮಂಜುನಾಥ್​ ಬೆಂಬಲಿಗರು ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿ, ದಳ ಮತ್ತು ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಭರ್ಜರಿ ಸಂಭ್ರಮಾಚರಣೆ ನಡೆಸಿದ್ದಾರೆ.
ಗಾಂಧಿನಗರ: ಅಮಿತ್ ಷಾಗೆ 7 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
